ಯಡ್ರಾಮಿ: ತಾಲ್ಲೂಕಿನ ಸುಂಬಡ ಗ್ರಾಮದ ಸಮೀಪ ಗುರುವಾರ ತಡರಾತ್ರಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮಲ್ಲಿಕಾರ್ಜುನ ಈರಣ್ಣ ಬಿಜಾಪುರ (32) ಮೃತಪಟ್ಟವರು.
10 ತಿಂಗಳ ಹಿಂದಷ್ಟೇ ಅವರಿಗೆ ಮದುವೆಯಾಗಿದೆ. ಪತ್ನಿ ನೋಡಲು ಗುರುವಾರ ಸುಂಬಡಕ್ಕೆ ಬರುತ್ತಿರುವ ವೇಳೆ ಕತ್ತಲಲ್ಲಿ ಕಾರು ವಿದ್ಯುತ್ ಕಂಬಕ್ಕೆ ಗುದ್ದಿದ ಕಾರಣ ಅವಘಡ ಸಂಭವಿಸಿದೆ. ಶುಕ್ರವಾರ ಬೆಳಿಗ್ಗೆ ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪಿಎಸ್ಐ ಬಸವರಾಜ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.