ADVERTISEMENT

ಕಳಪೆ ಕೀಟನಾಶಕ ನಿರ್ಬಂಧಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2019, 10:44 IST
Last Updated 23 ನವೆಂಬರ್ 2019, 10:44 IST
ಕರ್ನಾಟಕ ಪ್ರಾಂತ ರೈತ ಸಂಘದ ಸದಸ್ಯರು ಕಲಬುರ್ಗಿ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಕರ್ನಾಟಕ ಪ್ರಾಂತ ರೈತ ಸಂಘದ ಸದಸ್ಯರು ಕಲಬುರ್ಗಿ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ಕಲಬುರ್ಗಿ:ಬೆಳೆಗಳಿಗೆ ಕಳಪೆ ಮಟ್ಟದ ಕೀಟನಾಶಕಗಳನ್ನು ಮಾರಾಟ ಮಾಡುತ್ತಿರುವ ಅಂತರರಾಷ್ಟ್ರೀಯ ಕೀಟ ನಾಶಕ ಔಷಧಿ ಕಂಪನಿಗಳ ಪರವಾನಗಿಯನ್ನು ರದ್ದುಗೊಳಿಸಿ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಸದಸ್ಯರು ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

‘ಬಹುರಾಷ್ಟ್ರೀಯ ಕಂಪನಿಗಳ ಒತ್ತಡಕ್ಕೆ ಒಳಗಾಗಿ ಕೇಂದ್ರ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ. ಕ್ರಿಮಿನಾಶಕ ಔಷಧಿ ಬಳಸುವುದರಿಂದ ಹಿಂದಿನ ವರ್ಷಗಳಲ್ಲಿ ಬೆಳೆಗಳಿಗೆ ಸಿಂಪರಣೆ ಸಮಯದಲ್ಲಿ ಹಲವಾರು ರೈತರು ತೀರಿಕೊಂಡಿದ್ದಾರೆ. ಕಳಪೆ ಮಟ್ಟದ ಕ್ರಿಮಿನಾಶಕ ಔಷಧಿ ಮಾರಾಟವಾಗದಂತೆ ಕೂಡಲೇ ತಡೆಗಟ್ಟಬೇಕು.ಕಳಪೆ ಕೀಟನಾಶಕ ಔಷಧಿಗಳನ್ನು ಮಾರಾಟ ಮಾಡುತ್ತಿರುವ ಅಂಗಡಿಗಳ ಮಾಲೀಕರನ್ನು ಕೂಡಲೇ ಬಂಧಿಸಬೇಕು. ಕೀಟನಾಶಕ ಔಷಧಿಗಳನ್ನು ಮಾರಾಟ ಮಾಡುವ ಕಂಪನಿಗಳು ಮತ್ತು ಕಂಪನಿಗಳ ಡೀಲರುಗಳು ಹಾನಿಕಾರಕವಾದ ಔಷಧಿ ಮಾರಾಟ ಜಾಲವನ್ನು ತಡೆಗಟ್ಟಬೇಕು’ ಎಂದು ಒತ್ತಾಯಿಸಿದರು.

ಈ ಕುರಿತು ಜಿಲ್ಲಾ ಪಂಚಾಯಿತಿ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೂಲಕ ಕೃಷಿ ಸಚಿವ ಲಕ್ಷ್ಮಣ ಸವದಿ ಅವರಿಗೆ ಸಲ್ಲಿಸಿದ ಮನವಿಯನ್ನು ಮುಖ್ಯ ಯೋಜನಾಧಿಕಾರಿ ಪ್ರವೀಣಪ್ರಿಯಾ ಡೇವಿಡ್‌ ಸ್ವೀಕರಿಸಿದರು.

ADVERTISEMENT

ಸಂಘಟನೆಯ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.