ADVERTISEMENT

ಎಲ್ಲರೂ ದೇಶದ ಇತಿಹಾಸ ತಿಳಿಯಿರಿ; ಸಾಹಿತಿ ನಾಗೇಂದ್ರ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2022, 5:03 IST
Last Updated 8 ಆಗಸ್ಟ್ 2022, 5:03 IST
ಕಲಬುರಗಿಯ ಕನ್ನಡ ಭವನದ ಬಾಪುಗೌಡ ದರ್ಶನಾಪುರ ರಂಗಮಂದಿರದಲ್ಲಿ ಭಾನುವಾರ ನಡೆದ ಐತಿಹಾಸಿಕ ಸ್ಥಳಗಳ ಛಾಯಾಚಿತ್ರಗಳ ಪ್ರದರ್ಶನದಲ್ಲಿ ಕಲಾವಿದರನ್ನು ಸನ್ಮಾನಿಸಲಾಯಿತು
ಕಲಬುರಗಿಯ ಕನ್ನಡ ಭವನದ ಬಾಪುಗೌಡ ದರ್ಶನಾಪುರ ರಂಗಮಂದಿರದಲ್ಲಿ ಭಾನುವಾರ ನಡೆದ ಐತಿಹಾಸಿಕ ಸ್ಥಳಗಳ ಛಾಯಾಚಿತ್ರಗಳ ಪ್ರದರ್ಶನದಲ್ಲಿ ಕಲಾವಿದರನ್ನು ಸನ್ಮಾನಿಸಲಾಯಿತು   

ಕಲಬುರಗಿ: ‘ಏಕತೆ, ವಿಜ್ಞಾನ, ತಂತ್ರಜ್ಞಾನ, ಉತ್ತಮ ಶಿಕ್ಷಣ ವ್ಯವಸ್ಥೆ ಹೊಂದಿರುವ ಭಾರತ ಇತಿಹಾಸ ತಿಳಿದುಕೊಂಡರೆ ಭವಿಷ್ಯವನ್ನು ಅರಿತುಕೊಳ್ಳಬಹುದು’ ಎಂದು ಸಾಹಿತಿ ಡಾ. ನಾಗೇಂದ್ರ ಮಸೂತಿ ಹೇಳಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕ ಹಾಗೂ ಜಿಲ್ಲಾ ಫೋಟೋಗ್ರಾಫರ್ಸ್‌ ಅಸೋಸಿಯೇಷನ್ ವತಿಯಿಂದ ನಗರದ ಕನ್ನಡ ಭವನದ
ಬಾಪುಗೌಡ ದರ್ಶನಾಪುರ ರಂಗಮಂದಿರದಲ್ಲಿ ಭಾನುವಾರ ನಡೆದ ಐತಿಹಾಸಿಕ ಸ್ಥಳಗಳ ಛಾಯಾಚಿತ್ರಗಳ ಪ್ರದರ್ಶನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಇಂದಿನ ಸ್ವಾತಂತ್ರ್ಯದ ಫಲ ನಮ್ಮ ಪೂರ್ವಜರ ತ್ಯಾಗ, ಬಲಿದಾನದ ಸಂಕೇತವಾಗಿದೆ. ಭವಿಷ್ಯದ ಅರಿವು ಮೂಡಬೇಕಾದರೆ ಇತಿಹಾಸದ ಅವಲೋಕನ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ನಮ್ಮ ನೆಲವೇ ನಮಗೆ ಪ್ರೇರಣೆ ಆಗಬೇಕು’ ಎಂದು ಅಭಿಪ್ರಾಯಪಟ್ಟರು.

ADVERTISEMENT

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಚಿತ್ರ ಕಲಾವಿದರಾದ ಎಸ್.ಎಂ.ನೀಲಾ, ‘ಮನುಷ್ಯನ ವ್ಯಕ್ತಿತ್ವಕ್ಕೆ ಇತಿಹಾಸ ಬಹಳ ಮುಖ್ಯ. ಇತಿಹಾಸ ಇರದಿದ್ದರೆ ಏನನ್ನು ತಿಳಿದುಕೊಳ್ಳಲು ಸಾಧ್ಯವಿಲ್ಲ. ಕಲಬುರಗಿ ನೆಲ ಅತ್ಯಂತ ಶ್ರೀಮಂತ ಇತಿಹಾಸ ಹೊಂದಿದೆ. ಇಂತಹ ಇತಿಹಾಸವನ್ನು ತಮ್ಮ ಛಾಯಾಚಿತ್ರದ ಮೂಲಕ ಹೊರ ಜಗತ್ತಿಗೆ ಪರಿಚಯಿಸುತ್ತಿರುವ ಕಾರ್ಯ ಶ್ಲಾಘನೀಯ’ ಎಂದರು.

ಕಲಾವಿದರಾದ ನಾರಾಯಣ ಜೋಶಿ, ಅನೀಲಕುಮಾರ ಗಣೇಶಕರ್, ಅರುಣಕುಮಾರ ತೆಗನೂರ, ಶಿವಶರಣ ಡೊಣ್ಣೂರ್ ಸೇರಿದಂತೆ ಹಲವರ ಛಾಯಾಚಿತ್ರಗಳು ಪ್ರೇಕ್ಷಕರ ಗಮನ ಸೆಳೆದವು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ್, ಅಸೋಸಿಯೇಷನ್ ಅಧ್ಯಕ್ಷ ಬಸವರಾಜ ತೋಟದ, ಸಾಹಿತಿಗಳಾದ ಮುಡುಬಿ ಗುಂಡೇರಾವ, ಸುಬ್ರಾವ ಕುಲಕರ್ಣಿ, ಡಾ. ಶರಣಪ್ಪ ಮಾಳಗೆ, ಅನೀಲಕುಮಾರ ಹುಮನಾಬಾದ್, ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಸದಸ್ಯ ಹಣಮಂತ ಮಂತಟ್ಟಿ, ಶಿವರಾಜ ಅಂಡಗಿ ಮಾತನಾಡಿದರು.

ಪ್ರಮುಖರಾದ ರಾಜೇಂದ್ರ ಮಾಡಬೂಳ, ರವೀಂದ್ರಕುಮಾರ ಭಂಟನಳ್ಳಿ, ಕಲ್ಯಾಣಕುಮಾರ ಶೀಲವಂತ, ರವಿಕುಮಾರ ಶಹಾಪುರಕರ್, ವಿಶ್ವನಾಥ ತೊಟ್ನಳ್ಳಿ, ಮಂಜುಳಾ ಸುತಾರ, ಕವಿತಾ ಕಾವಳೆ, ಮಲ್ಲಿಕಾರ್ಜುನ ಇಬ್ರಹಿಂಪುರ, ಎಸ್.ಎಂ.ಪಟ್ಟಣಕರ್, ಹೆಚ್.ಎಸ್.ಬರಗಾಲಿ, ಗಣೇಶ ಚಿನ್ನಾಕಾರ, ಸಂತೋಷ ಕುಡಳ್ಳಿ, ಶಿವಶರಣಪ್ಪ ಹಡಪದ, ಬಸವರಾಜ ರಾವೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.