ADVERTISEMENT

ಕುಮಸಿ: ಪ್ಲಾಸ್ಟಿಕ್ ಮುಕ್ತ ಪರಿಸರ ಜಾಗೃತಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2020, 12:00 IST
Last Updated 19 ಫೆಬ್ರುವರಿ 2020, 12:00 IST
ಕುಮಸಿ ಗ್ರಾಮದಲ್ಲಿ ನಡೆದ ಪ್ಲಾಸ್ಟಿಕ್‌ ಮುಕ್ತ ಪರಿಸರ ಜಾಗೃತಿ ಕಾರ್ಯಕ್ರಮಕ್ಕೆ ಶಫೀಕ್ ಪಾಸುಮಿಯಾ ಚಾಲನೆ ನೀಡಿದರು
ಕುಮಸಿ ಗ್ರಾಮದಲ್ಲಿ ನಡೆದ ಪ್ಲಾಸ್ಟಿಕ್‌ ಮುಕ್ತ ಪರಿಸರ ಜಾಗೃತಿ ಕಾರ್ಯಕ್ರಮಕ್ಕೆ ಶಫೀಕ್ ಪಾಸುಮಿಯಾ ಚಾಲನೆ ನೀಡಿದರು   

ಕಲಬುರ್ಗಿ:ಇತ್ತೀಚೆಗೆ ಕುಮಸಿಯ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಏರ್ಪಡಿಸಲಾಗಿದ್ದ ‘ಸ್ವಚ್ಛತೆಯೇ ಸೇವೆ–ಪ್ಲಾಸ್ಟಿಕ್ ಮುಕ್ತ ಪರಿಸರ’ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಶಫೀಕ್ ಪಾಸುಮಿಯಾ ಉದ್ಘಾಟಿಸಿದರು.

ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಶಿಶು ಅಭಿವೃದ್ಧಿ ಯೋಜನೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕಲ್ಲ ಹಂಗರಗಾ, ಸರ್ಕಾರಿ ಪ್ರೌಢಶಾಲೆ ಸಹಯೋಗದಲ್ಲಿ ಏರ್ಪಡಿಸಿದ್ದ ಈ ಕಾರ್ಯಕ್ರಮದಲ್ಲಿ ಸ್ವಚ್ಛತೆಯೇ ಸೇವೆ–ಪ್ಲಾಸ್ಟಿಕ್ ಮುಕ್ತ ಪರಿಸರ ಕುರಿತು ವಿದ್ಯಾರ್ಥಿಗಳಿಗೆ ಭಾಷಣ, ಚಿತ್ರಕಲಾ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಛಾಯಾಚಿತ್ರ ಹಾಗೂ ಚಲನಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಕಲಬುರ್ಗಿ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯದ ಕ್ಷೇತ್ರ ಪ್ರಚಾರ ಅಧಿಕಾರಿ ಎಸ್.ಟಿ. ಶ್ರುತಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮುಷಖಪ್ ನಿಖಾರ್, ಕುಮಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಂಡಿತ್ ಸಿಂಧೆ, ಮುಖ್ಯ ಶಿಕ್ಷಕ ಡಿ. ಸುಭಾಷಚಂದ್ರ ಇದ್ದರು.

ADVERTISEMENT

ಕಲ್ಲಹಂಗರಗಾ ಹಿರಿಯ ಆರೋಗ್ಯ ಸಹಾಯಕ ಅಶೋಕ್ ಮೂಲಗೆ, ಕುಮಸಿ ಪ್ರೌಢಶಾಲೆಯ ಸಹ ಶಿಕ್ಷಕಿ ಶಾಹಿನ್ ಅಖ್ತರ್, ಕುಮಸಿ ಐಸಿಡಿಎಸ್ ಮೇಲ್ವಿಚಾರಕಿ ಶಾಂತಾ ಉಪನ್ಯಾಸ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.