ADVERTISEMENT

ಆಳಂದ ನಿವಾಸಿಗಳಿಗೆ ಸಿಹಿ ಸುದ್ದಿ: 1 ಕೆ.ಜಿ. ಪ್ಲಾಸ್ಟಿಕ್ ಕೊಟ್ಟರೆ ಸಕ್ಕರೆ ಫ್ರೀ!

​ಪ್ರಜಾವಾಣಿ ವಾರ್ತೆ
Published 19 ಜುಲೈ 2024, 14:45 IST
Last Updated 19 ಜುಲೈ 2024, 14:45 IST
ಆಳಂದ ತಾಲ್ಲೂಕಿನ ಮಾಡಿಯಾಳ ಗ್ರಾಮ ಪಂಚಾಯಿತಿ ವತಿಯಿಂದ ಪ್ಲಾಸ್ಟಿಕ್ ನೀಡಿದವರಿಗೆ ಸಕ್ಕರೆ ಪ್ಯಾಕೆಟ್ ನೀಡಲಾಯಿತು
ಆಳಂದ ತಾಲ್ಲೂಕಿನ ಮಾಡಿಯಾಳ ಗ್ರಾಮ ಪಂಚಾಯಿತಿ ವತಿಯಿಂದ ಪ್ಲಾಸ್ಟಿಕ್ ನೀಡಿದವರಿಗೆ ಸಕ್ಕರೆ ಪ್ಯಾಕೆಟ್ ನೀಡಲಾಯಿತು   

ಕಲಬುರಗಿ: ಆಳಂದ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ನಿವಾಸಿಗಳಾಗಿದ್ದರಿಗೆ ‘ಸಿಹಿ’ ಸುದ್ದಿ ಕಾದಿದೆ. ನಿಮ್ಮೂರಿನಲ್ಲಿರುವ, ಮನೆಯಲ್ಲಿರುವ ಒಂದು ಕೆ.ಜಿ. ಪ್ಲಾಸ್ಟಿಕ್ ಸಂಗ್ರಹಿಸಿ ಗ್ರಾಮ ಪಂಚಾಯಿತಿಗೆ ಕೊಟ್ಟರೆ ಇದಕ್ಕೆ ಪ್ರತಿಯಾಗಿ ಒಂದು ಕೆ.ಜಿ. ಸಕ್ಕರೆಯನ್ನು ಉಚಿತವಾಗಿ ನೀಡುತ್ತಾರೆ.

ಇದನ್ನು ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ವಿಸ್ತರಿಸಲು ನಿರ್ಧರಿಸಿರುವ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ ಅವರು ತಾಲ್ಲೂಕಿನ ಮಾಡಿಯಾಳ ಗ್ರಾಮ ಪಂಚಾಯಿತಿಯಲ್ಲಿ ಪ್ಲಾಸ್ಟಿಕ್ ಬದಲು ಸಕ್ಕರೆ ನೀಡಲು ಶುರು ಮಾಡಿದ್ದಾರೆ.

ಪ್ಲಾಸ್ಟಿಕ್‌ ಬಳಕೆ ಮಾಡಿ ಎಲ್ಲೆಂದರಲ್ಲಿ ಎಸೆಯುವುದರಿಂದ ಜಾನುವಾರುಗಳು ತಿನ್ನುತ್ತಿವೆ. ಚರಂಡಿಗಳು ಪ್ಲಾಸ್ಟಿಕ್‌ ತ್ಯಾಜ್ಯದಿಂದ ಕಟ್ಟಿಕೊಳ್ಳುತ್ತಿವೆ. ಇದನ್ನು ತಪ್ಪಿಸಲು ಪ್ಲಾಸ್ಟಿಕ್ ತಂದು ಕೊಡುವಂತೆ ಗ್ರಾಮಸ್ಥರಿಗೆ ಮನವಿ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಪ್ರತಿಕ್ರಿಯೆ ನೋಡಿಕೊಂಡು ಉಳಿದ ಪಂಚಾಯಿತಿಗಳಿಗೆ ವಿಸ್ತರಿಸಲಾಗುವುದು. ಸಕ್ಕರೆ ಖರೀದಿ ವೆಚ್ಚವನ್ನು ಪಂಚಾಯಿತಿ ನಿಧಿಯಿಂದಲೇ ಭರಿಸಲಾಗುವುದು ಎಂದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.