ADVERTISEMENT

ಕಲಬುರಗಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

​ಪ್ರಜಾವಾಣಿ ವಾರ್ತೆ
Published 19 ಜನವರಿ 2024, 5:03 IST
Last Updated 19 ಜನವರಿ 2024, 5:03 IST
   

ಕಲಬುರಗಿ: ನೆರೆಯ‌ ಮಹಾರಾಷ್ಟ್ರದ ಸೋಲಾಪುರದಲ್ಲಿ ಬಡವರಿಗೆ ಮನೆ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ವಾಯುಸೇನೆ ವಿಮಾನದ ಮೂಲಕ ಇಲ್ಲಿನ ವಿಮಾನ ನಿಲ್ದಾಣದ ಮೂಲಕ 9.30ಕ್ಕೆ ಬಂದಿಳಿದರು.

ರಾಜ್ಯ ಸರ್ಕಾರದ ಪರವಾಗಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಪ್ರಧಾನಿ ಅವರನ್ನು ಸ್ವಾಗತಿಸಿದರು.

ಕೇಂದ್ರ ಸಚಿವ ಭಗವಂತ ಖೂಬಾ, ಸಂಸದ ಡಾ.ಉಮೇಶ್ ಜಾಧವ್, ಶಾಸಕ ಬಸವರಾಜ ಮತ್ತಿಮಡು, ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಶಹರ ಘಟಕದ ಬಿಜೆಪಿ ಅಧ್ಯಕ್ಷ ಚಂದು ಪಾಟೀಲ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಬಿ. ಪೊಲೀಸ್ ಕಮಿಷನರ್ ಚೇತನ್ ಆರ್, ಎಸ್ಪಿ ಅಡ್ಡೂರು ಶ್ರೀನಿವಾಸಲು ಭಾಗವಹಿಸಿದ್ದರು.

ADVERTISEMENT

ಬೆಳಿಗ್ಗೆ 9.50ಕ್ಕೆ ವಾಯುಪಡೆ ಹೆಲಿಕಾಪ್ಟರ್ ಮೂಲಕ ಸೋಲಾಪುರಕ್ಕೆ ತೆರಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.