ಕಲಬುರಗಿ: ಆಳಂದ ತಾಲ್ಲೂಕಿನ ನರೋಣಾ ಪೊಲೀಸ್ ಠಾಣೆಯ ಪಿಎಸ್‌ಐ ಸಿದ್ದರಾಮ ಅವರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಒಂದೂವರೆ ವರ್ಷದ ಹೆಣ್ಣು ಮಗು ಸಂಶಯಾಸ್ಪದವಾಗಿ ಮೃತಪಟ್ಟು, ವಿಳಂಬವಾಗಿ ಸ್ವಯಂಪ್ರೇರಿತ ಪೋಕ್ಸೊ ಪ್ರಕರಣ ದಾಖಲಿಸಿಕೊಂಡ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ಹೇಳಿವೆ.
ಜ್ವರದಿಂದ ಬಳಲುತ್ತಿದ್ದ ಮಗುವನ್ನು ಪೋಷಕರು ಜುಲೈ 18ರಂದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಮರುದಿನವೇ (ಜು.19) ವೈದ್ಯರು ಲೈಂಗಿಕ ದೌರ್ಜನ್ಯದ ಶಂಕೆ ಸಹ ವ್ಯಕ್ತಪಡಿಸಿದ್ದರು. ಜು.24ರಂದು ಮಗು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದು, ಎಂಎಲ್‌ಸಿಯಲ್ಲಿ ಲೈಂಗಿಕ ದೌರ್ಜನ್ಯ ಎಂದು ಉಲ್ಲೇಖಿಸಲಾಗಿತ್ತು. ಈ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳದಿರುವುದು ಕಂಡು ಬಂದಿದ್ದರಿಂದ ಪಿಎಸ್‌ಐಗೆ ನೋಟಿಸ್ ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.