ADVERTISEMENT

ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹ 1 ಲಕ್ಷ ದಂಡ

ಜೇವರ್ಗಿ ತಾಲ್ಲೂಕಿನ ಬಾಲಕಿ ಮೇಲೆ ಅತ್ಯಾಚಾರ

​ಪ್ರಜಾವಾಣಿ ವಾರ್ತೆ
Published 12 ಜುಲೈ 2019, 15:38 IST
Last Updated 12 ಜುಲೈ 2019, 15:38 IST

ಕಲಬುರ್ಗಿ: ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಸಾಬೀತಾಗಿದ್ದರಿಂದ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಜೇವರ್ಗಿ ತಾಲ್ಲೂಕಿನ ಕೋಳಕೂರ ಗ್ರಾಮದ ಸಲೀಂ ಕುತ್ಬುದ್ದೀನ್‌ ಎಂಬಾತನಿಗೆ ಪೋಕ್ಸೊ ಕಾಯ್ದೆಯಡಿ ಜೀವಾವಧಿ ಶಿಕ್ಷೆ ಹಾಗೂ ₹ 1 ಲಕ್ಷ ದಂಡ ವಿಧಿಸಿದೆ.

ಜೊತೆಗೆ, ಸಂತ್ರಸ್ತ ಬಾಲಕಿಗೆ ಜಿಲ್ಲಾ ಕಾನೂನು ನೆರವು ಸಮಿತಿ ₹ 5 ಲಕ್ಷ ಪರಿಹಾರ ನೀಡಬೇಕು ಎಂದೂ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಗೋಪಾಲಪ್ಪ ಎಸ್‌. ಅವರು ಆದೇಶಿಸಿದ್ದಾರೆ.

ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಪಿಐ ಡಿ.ಬಿ.ಪಾಟೀಲ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ADVERTISEMENT

ವಾದ–ವಿವಾದ ಆಲಿಸಿದ ನ್ಯಾಯಾಧೀಶರು ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿದರು.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್‌.ವಿ.ಚಟ್ನಾಳಕರ ವಾದ ಮಂಡಿಸಿದ್ದರು.

ಪ್ರಕರಣ ದಾಖಲಾಗಿ ಕೇವಲ ಹತ್ತು ತಿಂಗಳಲ್ಲಿಯೇ ನ್ಯಾಯಾಲಯ ತೀರ್ಪು ನೀಡಿದ್ದು ವಿಶೇಷ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.