ADVERTISEMENT

ಕಲಬುರಗಿ: 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2024, 16:29 IST
Last Updated 24 ಮಾರ್ಚ್ 2024, 16:29 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಕಲಬುರಗಿ: ಕಾಳಗಿ ತಾಲ್ಲೂಕಿನ ಗ್ರಾಮವೊಂದರಲ್ಲಿ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಅದೇ ಗ್ರಾಮದ ಯುವಕನ ವಿರುದ್ಧ ಕಾಳಗಿ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ ಭೀಮು ಶೇಖಪ್ಪ (20) ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ADVERTISEMENT

ಆರೋಪಿ ಭೀಮು, ಸಂತ್ರಸ್ತೆ ಪೋಷಕರ ಮನೆಯಲ್ಲಿ ಬಾಡಿಗೆ ಪಡೆದು ವಾಸವಾಗಿದ್ದ. ಪೋಷಕರು ಬಾಲಕಿಯನ್ನು ಮನೆಯಲ್ಲಿ ಬಿಟ್ಟು ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಬಾಲಕಿಯ ಕುಟುಂಬಸ್ಥರೊಂದಿಗೆ ಒಡನಾಟ ಇರಿಸಿಕೊಂಡಿದ್ದ ಭೀಮು, ಆಗಾಗ ಮನೆಗೆ ಹೋಗಿ ಬರುತ್ತಿದ್ದ. ಇದೇ ಸಲುಗೆಯನ್ನು ದುರುಪಯೋಗ ಪಡಿಸಿಕೊಂಡು ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಕಳೆದ ಹಲವು ದಿನಗಳಿಂದ ಬಾಲಕಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಈ ಬಗ್ಗೆ ಅರಿವಿರದ ಬಾಲಕಿ ಪೋಷಕರ ಮುಂದೆ ಹೊಟ್ಟೆ ನೋವಾಗುತ್ತಿದೆ ಎಂದಷ್ಟೇ ಹೇಳುತ್ತಿದ್ದಳು. ಬಾಲಕಿಯನ್ನು ಭಾನುವಾರ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಅತ್ಯಾಚಾರಕ್ಕೆ ಒಳಗಾಗಿದ್ದು ಗೊತ್ತಾಯಿತು ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.