ಪ್ರಾತಿನಿಧಿಕ ಚಿತ್ರ
ಕಲಬುರಗಿ: ನಗರದ ಖಾಸಗಿ ಶಾಲೆಯೊಂದರಲ್ಲಿ ಐವರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಮೈ–ಕೈ ಮುಟ್ಟಿ ಕಿರುಕುಳ ನೀಡಿದ ಆರೋಪದಡಿ ಶಾಲಾ ಸಿಬ್ಬಂದಿಯ ಸಂಬಂಧಿ ವಿರುದ್ಧ ಇತ್ತೀಚೆಗೆ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
‘ಐವರು ಬಾಲಕಿಯರೊಂದಿಗೆ ದಾವೂದ್ (60) ಎಂಬಾತ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ’ ಎಂದು ಆರೋಪಿಸಿ ಬಾಲಕಿಯರ ಪೋಷಕರು ದೂರು ನೀಡಿದ್ದರು. ಆ ದೂರಿನನ್ವಯ ವಿಶ್ವವಿದ್ಯಾಲಯ ಠಾಣೆ ಪೊಲೀಸರು ದಾವೂದ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿ: ನಗರದ ಕಾಂತಾ ಕಾಲೊನಿಯ ಬುದ್ಧ ವಿಹಾರ ಎದುರಿನ ಪ್ರದೇಶದ ಮನೆಯೊಂದರ ಬೀಗ ಮುರಿದ ಕಳ್ಳರು ₹2.65 ಲಕ್ಷ ಮೌಲ್ಯದ ಸ್ವತ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.
‘45 ಗ್ರಾಂ ಚಿನ್ನಾಭರಣ, 100 ಗ್ರಾಂ ಬೆಳ್ಳಿ ಆಭರಣ ಹಾಗೂ ₹5 ಸಾವಿರ ನಗದು ಕಳುವಾಗಿದೆ’ ಎಂದು ಚಿನ್ನ–ಬೆಳ್ಳಿ ಆಭರಣಗಳನ್ನು ಕಳೆದುಕೊಂಡ ಶಿಕ್ಷಕ ತೂಗುದೀಪ ಸೂರನ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ವಾಕಿಂಗ್ ಮಾಡುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾರೆ.
ರಾಮಮಂದಿರ ವೃತ್ತದಿಂದ ನಾಗನಹಳ್ಳಿ ಕ್ರಾಸ್ ನಡುವಣ ರಿಂಗ್ ರಸ್ತೆಯ ಸರ್ವೀಸ್ ರಸ್ತೆಯಲ್ಲಿ ಈದ್ಗಾ ಮೈದಾನದ ಸಮೀಪ ಈ ಕೃತ್ಯ ನಡೆದಿದೆ.
ಎಸ್‌ಬಿಐ ಬ್ಯಾಂಕ್‌ನ ಉದ್ಯೋಗಿ ಪ್ರೀತಿ ಸುತಾರ ಚಿನ್ನಾಭರಣ ಕಳೆದುಕೊಂಡವರು.
‘10 ಗ್ರಾಂ ಚಿನ್ನದ ಸರ ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ’ ಎಂದು ಪ್ರೀತಿ ಸುತಾರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.