ADVERTISEMENT

ಅಫಜಲಪುರ: 434 ಟನ್ ಅಕ್ರಮ ಮರಳು ಜಪ್ತಿ

​ಪ್ರಜಾವಾಣಿ ವಾರ್ತೆ
Published 30 ಜೂನ್ 2019, 8:52 IST
Last Updated 30 ಜೂನ್ 2019, 8:52 IST
ಪೊಲೀಸರು ಮುಟ್ಟುಗೋಲು ಹಾಕಿಕೊಂಡಿರುವ ಮರಳು ರಾಶಿ
ಪೊಲೀಸರು ಮುಟ್ಟುಗೋಲು ಹಾಕಿಕೊಂಡಿರುವ ಮರಳು ರಾಶಿ   

ಕಲಬುರ್ಗಿ: ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿವಿಧೆಡೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 434 ಟನ್ ಮರಳನ್ನು ಜಪ್ತಿ ಮಾಡಿರುವ ಪೊಲೀಸರು ಒಂದು ಜೆಸಿಬಿ, ಎರಡು ಟಿಪ್ಪರ್ ವಶಕ್ಕೆ ಪಡೆದಿದ್ದಾರೆ.

ಅಕ್ರಮ ಸಾಗಾಟ‌ ಮಾಡುತ್ತಿದ್ದ ಟಿಪ್ಪರ್‌ನನಾಲ್ವರು ಚಾಲಕರು ಹಾಗೂ ಕ್ಲೀನರ್‌ಗಳನ್ನು ಬಂಧಿಸಿದ್ದಾರೆ.

ಇತ್ತೀಚೆಗೆ ಕಲಬುರ್ಗಿಯಲ್ಲಿ ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಅರಣ್ಯ, ಗಣಿ‌ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಕ್ರಮ ಮರಳು ದಂದೆ ಮಟ್ಟಹಾಕಲು ಸೂಚಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.