ADVERTISEMENT

ಕಲಬುರ್ಗಿಯಲ್ಲಿ ಶೂಟೌಟ್: ರೌಡಿ ಕಾಲಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2020, 3:19 IST
Last Updated 29 ಆಗಸ್ಟ್ 2020, 3:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಲಬುರ್ಗಿ: ರೌಡಿ ಶೀಟರ್ ಪಯೂಮ್ ಅಲಿ ಮಿರ್ಜಾ ಎಂಬಾತನ ಮೇಲೆ‌ ಪೊಲೀಸರು ಶನಿವಾರ ಬೆಳಿಗ್ಗೆ ಗುಂಡು ಹಾರಿಸಿದ್ದಾರೆ. ಆತನ ಕಾಲಿಗೆ ಗುಂಡು ತಗುಲಿ ಗಾಯವಾಗಿದೆ.

ಪ್ರಕರಣವೊಂದರಲ್ಲಿ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲು ತೆರಳಿದ್ದ ಸಂದರ್ಭದಲ್ಲಿ ನಗರದ ಹೊರವಲಯದ ನಾಗರಹಳ್ಳಿ ಬಳಿ ಪೊಲೀಸರ ಮೇಲೆ‌ಯೇ ದಾಳಿ‌ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದ್ದು, ಕಾಲಿಗೆ ತಗುಲಿಗೆ. ಆತನನ್ನು ಜಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT