ADVERTISEMENT

ಯಡ್ರಾಮಿ | ಶಾಸಕ, ಸಚಿವ, ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2026, 7:56 IST
Last Updated 12 ಜನವರಿ 2026, 7:56 IST
ಶಾಸಕ, ಸಚಿವ, ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ
ಶಾಸಕ, ಸಚಿವ, ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ   

ಯಡ್ರಾಮಿ: ಪಟ್ಟಣಕ್ಕೆ ಭೇಟಿ ನೀಡಿ ಸೋಮವಾರ ನಡೆಯಲಿರುವ ಪ್ರಜಾಸೌಧಗಳ ಅಡಿಗಲ್ಲು ಸಮಾರಂಭ, ನೂತನ ಕೆಪಿಎಸ್ ಶಾಲೆಗಳ ಮಂಜೂರಾತಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದ ಪೂರ್ವಸಿದ್ಧತೆಗಳನ್ನು ವೀಕ್ಷಿಸಿ, ಸ್ಥಳ ಪರಿಶೀಲನೆ ನಡೆಸಲಾಯಿತು ಹಾಗೂ ಎಲ್ಲಾ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆ ನೀಡಲಾಯಿತು’ ಎಂದು ಶಾಸಕ ಡಾ ಅಜಯಸಿಂಗ್ ಹೇಳಿದರು.

ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್‌ ಖರ್ಗೆ, ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣ್ ಕುಮಾರ್ ಪಾಟೀಲ, ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನುಮ್ ಸೇರಿದಂತೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.