ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಗಾಣಗಾಪುರ ಸಮೀಪದ ಹೊಲವೊಂದರಲ್ಲಿ ಮಳೆಯಿಂದ ಹಾನಿಯಾದ ಬೆಳೆಯ ಬಗೆಗೆ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ಪಡೆದರು
ಕಲಬುರಗಿ: ಜಿಲ್ಲೆಯಲ್ಲಿ ಒಂದೆಡೆ ಧಾರಾಕಾರ ಮಳೆ ಮತ್ತೊಂದೆಡೆ ಮಹಾರಾಷ್ಟ್ರದಿಂದ ಭೀಮಾನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು ಹಲವೆಡೆ ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಮಹಾರಾಷ್ಟ್ರದ ಉಜನಿ, ಸೀನಾ ಹಾಗೂ ವೀರ ಜಲಾಶಯದಿಂದ ಭೀಮಾನದಿ ಉಕ್ಕೇರಿ ಹರಿಯುತ್ತಿದ್ದು, ಜಿಲ್ಲೆಯ ಅಫಜಲಪುರ ಹಾಗೂ ಜೇವರ್ಗಿ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭೀಮಾನದಿ ತೀರದ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರಕ್ಕೆ ಭೇಟಿ ನೀಡಿ ಗಾಣಗಾಪುರ ಹಾಗೂ ಜೇವರ್ಗಿ ತಾಲ್ಲೂಕಿನ ಇಟಾಗಾ ನಡುವಣ ಸೇತುವೆ ಜಲಾವೃತಗೊಂಡಿರುವುದನ್ನು ವೀಕ್ಷಿಸಿದರು.
ತಾಲ್ಲೂಕಿನ ದೇವಲ್ ಗಾಣಗಾಪುರ ಗ್ರಾಮದ ಬಳಿ ತಾತ್ಕಾಲಿಕವಾಗಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಅಲ್ಲಿನ ನಿವಾಸಿಗಳೊಂದಿಗೆ ಮಾತನಾಡಿ ಸೌಲಭ್ಯ ಒದಗಿಸಿರುವುದರ ಕುರಿತು ಮಾಹಿತಿ ಪಡೆದರು.
ತಾಲ್ಲೂಕಿನ ಮಳೆಯಿಂದ ಹಾನಿಗೊಳಗಾದ ಬೆಳೆಗಳನ್ನು ಕೂಡಾ ಸಚಿವರ ಪರಿಶೀಲಿಸಿ ರೈತರೊಂದಿಗೆ ಮಾತನಾಡಿದರು
ಬಳಿಕ ಗ್ರಾಮದ ಹೊರವಲಯದಲ್ಲಿ ತೊಗರಿ ಸೇರಿದಂತೆ ಇತರೆ ಬೆಳೆ ಹಾನಿಗೀಡಾಗಿರುವುದನ್ನು ಪರಿಶೀಲಿಸಿದ ಸಚಿವರು
ಸ್ಥಳದಲ್ಲಿದ್ದ ಕೃಷಿ ಹಾಗೂ ಇತರೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಬೆಳೆ ಹಾನಿಯಾದ ಕುರಿತು ಸಮರ್ಪಕ ಹಾಗೂ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.