ಕಲಬುರಗಿ: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಕ್ರಮಕ್ಕೆ ಬಿಜೆಪಿ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಅಶೋಕ ಬಗಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ‘2002ರಲ್ಲಿ ಪ್ರಿಯಾಂಕ್ ಖರ್ಗೆ ಅವರ ತಂದೆ, ಸಚಿವರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನ ನಾಗವಾರದಲ್ಲಿ ಆಯೋಜಿಸಿದ್ದ ಆರ್‌ಎಸ್‌ಎಸ್ ಸಮರಸತಾ ಶಿಬಿರಕ್ಕೆ ಭೇಟಿ ನೀಡಿ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದರು. ಇದೀಗ ಅವರ ಪುತ್ರ ಆರ್‌ಎಸ್‌ಎಸ್ ಚಟುವಟಿಕೆಗಳ ನಿಷೇಧಕ್ಕೆ ಮುಂದಾಗಿರುವುದು ದುರದೃಷ್ಟಕರ’ ಎಂದಿದ್ದಾರೆ.
‘ಪ್ರಿಯಾಂಕ್ ಅವರು ಆರ್‌ಎಸ್‌ಎಸ್ ವಿಚಾರಧಾರೆಗಳನ್ನು ತಿಳಿದುಕೊಂಡು ಮುಖ್ಯಮಂತ್ರಿಗೆ ಪತ್ರ ಬರೆಯಬೇಕಾಗಿತ್ತು. ಮನಸ್ಸಿನಲ್ಲಿ ಕಪೋಲಕಲ್ಪಿತ ವಿಷಯಗಳನ್ನು ಇಟ್ಟುಕೊಂಡು ಆರ್‌ಎಸ್‌ಎಸ್ ನಿಷೇಧಕ್ಕೆ ಆಗ್ರಹಿಸಿ ಪತ್ರ ಬರೆದಿರುವ ನಿಲುವು ಸರಿಯಾದುದಲ್ಲ. ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಜನತೆಯ ಕ್ಷಮೆ ಕೇಳಬೇಕು’ ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.