ADVERTISEMENT

ಲಸಿಕೆ ಪಡೆಯಲು ಪ್ರೇರೇಪಿಸಿ: ಶಾಸಕ ಪ್ರಿಯಾಂಕ್‌ ಖರ್ಗೆ ಸಲಹೆ

ಲಸಿಕೆ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2021, 2:42 IST
Last Updated 27 ಏಪ್ರಿಲ್ 2021, 2:42 IST
ವಾಡಿ ಪುರಸಭೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಲಸಿಕೆ ಅಭಿಯಾನಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿದ ನಂತರ ಅಧಿಕಾರಿಗಳು ಹಾಗೂ ಪುರಸಭೆ ಸದಸ್ಯರ ಸಭೆ ನಡೆಸಿದರು
ವಾಡಿ ಪುರಸಭೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಲಸಿಕೆ ಅಭಿಯಾನಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿದ ನಂತರ ಅಧಿಕಾರಿಗಳು ಹಾಗೂ ಪುರಸಭೆ ಸದಸ್ಯರ ಸಭೆ ನಡೆಸಿದರು   

ವಾಡಿ: ‘ಕೊರೊನಾ ನಿಯಂತ್ರ ಣಕ್ಕೆ ಲಸಿಕೆಯೇ ರಾಮಬಾಣವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಬೇಕು, ಮತ್ತೊಬ್ಬರಿಗೂ ಪ್ರೇರಣೆ ನೀಡಬೇಕು’ ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಸಲಹೆ ನೀಡಿದರು.

ಸ್ಥಳೀಯ ಪುರಸಭೆ ವತಿಯಿಂದ ಸೋಮವಾರ ಆಯೋಜಿಸಿದ್ದ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳುವುದರ ಮೂಲಕ ಸಂಭಾವ್ಯ ಅನಾಹುತದಿಂದ ರಕ್ಷಿಸಿಕೊಳ್ಳಬೇಕು. ಲಸಿಕೆ ಹಾಕಿಸಿಕೊಂಡ ನಂತರ ಕೋವಿಡ್‌ ಬಂದರೂ ಅದರ ಪರಿಣಾಮ ದೊಡ್ಡದಾಗಿ ಇರುವುದಿಲ್ಲ. ಈ ಬಗ್ಗೆ ಯಾವುದೇ ಗೊಂದಲಕ್ಕೆ ಆಸ್ಪದ ಕೊಡದೇ ಚುಚ್ಚುಮದ್ದು ಪಡೆಯಿರಿ. ಜನರಿಗೆ ತಿಳಿಹೇಳಲು ಚುನಾಯಿತ ಸದಸ್ಯರು ಶ್ರಮಿಸಬೇಕು’ ಎಂದರು.

‘ಮುಂಬೈ, ಬೆಂಗಳೂರಿನಿಂದ ಅಪಾರ ಪ್ರಮಾಣದಲ್ಲಿ ವಲಸೆ ಕಾರ್ಮಿಕರು ಗ್ರಾಮಗಳಿಗೆ ಮರಳುತ್ತಿ ದ್ದಾರೆ. ಕ್ವಾರಂಟೈನ್ ಮಾಡುವ ಪ್ರಯತ್ನ ಸಹ ನಡೆಸುತ್ತಿಲ್ಲ. ಇದರಿಂದ ಹಳ್ಳಿಗಳಲ್ಲಿ ರೋಗ ಹಬ್ಬುವ ಸಾಧ್ಯತೆ ಇದೆ’ ಎಂದೂ ಕಳವಳ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.