
ಕಲಬುರಗಿ: ‘ಯಾವ ಪಕ್ಷದಿಂದ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಬರ್ತಾರೆ? ಅವರ ನಿವೇಶನದಲ್ಲಿ ಬಿಜೆಪಿ ಈಗಾಗಲೇ ಬಹುಮಹಡಿ ಕಟ್ಟಡ ಕಟ್ಟಿಕೊಂಡಿದೆ. ಜೆಡಿಎಸ್ ಇನ್ನೂ ಎಲ್ಲಿಯಾದರೂ ಉಳಿದಿದೆಯಾ?’ ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದರು.
ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಕುರಿತ ಸುದ್ದಿಗಾರರ ಪ್ರಶ್ನೆಗೆ ಅವರು ಭಾನುವಾರ ಹೀಗೆ ಪ್ರತಿಕ್ರಿಯಿಸಿದರು.
‘ಅವರ ಸಂಬಂಧಿಕರೇ ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸಿದ್ದಾರೆ ಅಂದರೆ ಆ ಪಕ್ಷ ಎಷ್ಟು ಪ್ರಬಲವಾಗಿದೆ? ಈ ಮೊದಲು ಸಹ ಕುಮಾರಸ್ವಾಮಿ ರಾಜ್ಯ ರಾಜಕಾರಣದಲ್ಲಿದ್ದರು. ಏನಾಯ್ತು? ಎಂದು ಪ್ರಶ್ನಿಸಿದರು.
‘ಬಿಜೆಪಿ, ಜೆಡಿಎಸ್ ಪಕ್ಷಗಳು ಎಂದಾದರೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಿವೆಯಾ? ಬಿಜೆಪಿಯೇ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಿಲ್ಲ, ಅಂದ ಮೇಲೆ ಜೆಡಿಎಸ್ ಬರುತ್ತಾ?’ ಎಂದು ಕೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.