ADVERTISEMENT

ಟೆನಿಸ್‌ ಆಡಿ ಸಂಭ್ರಮಿಸಿದ ಸಚಿವರು

ಕಲಬುರಗಿ ಓಪನ್ ಟೆನಿಸ್: ಮುಖ್ಯ ಸುತ್ತಿನ ಪಂದ್ಯಗಳಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2026, 7:18 IST
Last Updated 4 ಮಾರ್ಚ್ 2026, 7:18 IST
ಕಲಬುರಗಿಯ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಿಳೆಯರ ಐಟಿಎಫ್‌ ಟೆನಿಸ್‌ ಟೂರ್ನಿಯ ಮುಖ್ಯ ಸುತ್ತಿನ ಪಂದ್ಯಗಳಿಗೆ ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ.ಶರಣಪ್ರಕಾಶ ಪಾಟೀಲ ಸೇರಿದಂತೆ ಗಣ್ಯರು ಚಾಲನೆ ನೀಡಿದರು
ಕಲಬುರಗಿಯ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಿಳೆಯರ ಐಟಿಎಫ್‌ ಟೆನಿಸ್‌ ಟೂರ್ನಿಯ ಮುಖ್ಯ ಸುತ್ತಿನ ಪಂದ್ಯಗಳಿಗೆ ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ.ಶರಣಪ್ರಕಾಶ ಪಾಟೀಲ ಸೇರಿದಂತೆ ಗಣ್ಯರು ಚಾಲನೆ ನೀಡಿದರು   

ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಂಗಳವಾರ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಟೆನಿಸ್ ಆಡಿ ಸಂತಸಪಟ್ಟರು.

ಐಟಿಎಫ್ ಮಹಿಳಾ ಟೆನಿಸ್ ಟೂರ್ನಿಯ ಪ್ರಧಾನ ಸುತ್ತಿನ ಪಂದ್ಯಗಳಿಗೆ ಸಚಿವರು ಚಾಲನೆ ನೀಡಿದ ಅಂಗಣದಲ್ಲಿ ಕೆಲಹೊತ್ತು ಆಟವಾಡಿದರು.

ಸಚಿವದ್ವಯರಿಗೆ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಸಾಥ್ ನೀಡಿದರು. ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತು ಕೆಲಹೊತ್ತು ಪಂದ್ಯವನ್ನು ವೀಕ್ಷಿಸಿ, ಆಟಗಾರ್ತಿಯರನ್ನು ಹುರಿದುಂಬಿಸಿದರು.

ADVERTISEMENT

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ, ತಿಪ್ಪಣ್ಣಪ್ಪ ಕಮಕನೂರ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಸಿಇಒ ಭವಂರಸಿಂಗ್ ಮೀನಾ, ಪಾಲಿಕೆ ಮೇಯರ್ ವರ್ಷಾ ಜಾನೆ, ಪಾಲಿಕೆ ಆಯುಕ್ತ ಅವಿನಾಶ್ ಶಿಂದೆ, ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ, ಎಸ್ಪಿ ಅಡ್ಡೂರು ಶ್ರೀನಿವಾಸುಲು, ಉಪವಿಭಾಗಾಧಿಕಾರಿ ಸಾಹಿತ್ಯಾ ಆಲದಕಟ್ಟಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸಮದ್ ಪಟೇಲ್, ಬ್ಯಾಸ್ಕೆಟ್‌ಬಾಲ್ ಕೋಚ್ ಪ್ರವೀಣ್ ಪುಣೆ ಸೇರಿದಂತೆ ಟೂರ್ನಿಯ ಆಯೋಜಕರು, ಪ್ರೇಕ್ಷಕರು ಇದ್ದರು.

ಪ್ರೇಕ್ಷಕರ ಕೊರತೆ: ಟೆನಿಸ್‌ ಟೂರ್ನಿಯ ಮುಖ್ಯ ಸುತ್ತಿನ ಪಂದ್ಯಗಳು ಆರಂಭವಾಗಿದ್ದರೂ ನಿರೀಕ್ಷಿಸಿದಷ್ಟು ಪ್ರೇಕ್ಷಕರು ಗ್ಯಾಲರಿಯಲ್ಲಿ ಕಂಡುಬರಲಿಲ್ಲ. ಆಟಗಾರ್ತಿಯರ ಜೊತೆಗೂಡಿ ಬಂದ ಪೋಷಕರು, ಬಾಲ್‌ಬಾಯ್‌ಗಳು, ಟೂರ್ನಿಯ ಆಯೋಜಕರೇ ಕುಳಿತಿದ್ದುದು ಕಾಣಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.