ADVERTISEMENT

ಕಲಬುರ್ಗಿ: ಜಿಮ್ಸ್‌ಗೆ ಭೇಟಿ ನೀಡಿದ ಪ್ರಿಯಾಂಕ್

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2021, 2:33 IST
Last Updated 27 ಏಪ್ರಿಲ್ 2021, 2:33 IST
ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಸೋಮವಾರ ಜಿಮ್ಸ್ ನಿರ್ದೇಶಕಿ ಡಾ. ಕವಿತಾ ಪಾಟೀಲ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು
ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಸೋಮವಾರ ಜಿಮ್ಸ್ ನಿರ್ದೇಶಕಿ ಡಾ. ಕವಿತಾ ಪಾಟೀಲ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು   

ಕಲಬುರ್ಗಿ: ಕೊರೊನಾ ಸೋಂಕಿನಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ನೀಡುತ್ತಿರುವ ಜಿಮ್ಸ್‌ ಆಸ್ಪತ್ರೆಗೆ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಸೋಮವಾರ ಭೇಟಿ ನೀಡಿದರು.

ಜಿಮ್ಸ್‌ನ ಐಸಿಯು ವಾರ್ಡ್‌ಗಳಿಗೆ ಭೇಟಿ ನೀಡಿದ ಪ್ರಿಯಾಂಕ್ ನಂತರ ಜಿಮ್ಸ್ ನಿರ್ದೇಶಕಿ ಡಾ. ಕವಿತಾ ಪಾಟೀಲ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

‘ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು, ರಾಜ್ಯ ಸರ್ಕಾರವು ಬೆಂಗಳೂರಿಗೆ ಸೀಮಿತವಾಗದೆ, ಇತ್ತ ಕಡೆಗೂ ವೈದ್ಯಕೀಯ ನೆರವನ್ನು ಒದಗಿಸುವ ಅಗತ್ಯವಿದೆ. ಆದ್ದರಿಂದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಪತ್ರ ಬರೆದಿದ್ದು, ಶೀಘ್ರವೇ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸುವಂತೆ ಆಗ್ರಹಿಸಿದ್ದೇನೆ. ಕೊರೊನಾ ಎರಡನೇ ಅಲೆ ಉಲ್ಬಣಗೊಳ್ಳುತ್ತಿರುವುದರಿಂದ ರಾಜ್ಯ ಸರ್ಕಾರವು ಕಟ್ಟುನಿಟ್ಟಿನ ಕ್ರಮ ಜರುಗಿಸಿದ್ದು ಸ್ವಾಗತಾರ್ಹ. ಆದರೆ, ಹಿಂದಿನಂತೆ ಈ ಬಾರಿ ಜನಸಾಮಾನ್ಯರು, ಕೂಲಿ ಕಾರ್ಮಿಕರು ಹಾಗೂ ಶ್ರಮಿಕ ವರ್ಗದ ಜೀವನಕ್ಕೆ ಈ ನಿಯಮಗಳು ಮುಳ್ಳಾಗದಿರುವಂತೆ ನೋಡಿಕೊಳ್ಳುವ ಜವಾಬ್ದಾರಿಯೂ ಸರ್ಕಾರದ ಮೇಲಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.