
ಪ್ರಜಾವಾಣಿ ವಾರ್ತೆ
ಕಲಬುರಗಿ: ವಿಧಾನಸೌಧದ ಆವರಣದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿರುವುದು ಗಂಭೀರ ವಿಷಯವಾಗಿದ್ದು, ಸರ್ಕಾರ ವಿಶೇಷ ತಂಡವನ್ನು ರಚಿಸಿ ತನಿಖೆ ನಡೆಸಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ಬಿ.ಆರ್. ಪಾಟೀಲ ಒತ್ತಾಯಿಸಿದ್ದಾರೆ.
‘ಘೋಷಣೆ ಕೂಗಿದ್ದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಮೇಲ್ನೋಟಕ್ಕೆ ಸಾಬೀತು ಆಗಿದೆ. ದೇಶದ ಎಲ್ಲಾ ನಿವಾಸಿಗಳು ಪಕ್ಷಾತೀತವಾಗಿ ದೇಶ ದ್ರೋಹಿಗಳ ಕೃತ್ಯವನ್ನು ಖಂಡಿಸಬೇಕು. ಇದರಲ್ಲಿ ತುಷ್ಟೀಕರಣ ಮಾಡುವ ಪ್ರಶ್ನೆಯೇ ಇಲ್ಲ. ದೇಶ ದ್ರೋಹಿಗಳ ಮೇಲೆ ಖಡಕ್ಕಾದ ಕಾನೂನು ಚಲಾವಣೆ ಮಾಡಿ, ತನಿಖೆಗೆ ಒಳಪಡಿಸಬೇಕು’ ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.