ಕಲಬುರಗಿ: ದೇಶದ ಚುನಾವಣಾ ವ್ಯವಸ್ಥೆ ಸುಧಾರಣೆಗಾಗಿ 21 ಅಂಶಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿ ಭಾರತೀಯ ಚುನಾವಣಾ ಸುಧಾರಣಾ ಹೋರಾಟ ಸಮಿತಿಯ ಸಂಸ್ಥಾಪಕ ರಮೇಶ ಧುತ್ತರಗಿ ನಗರದ ಗಾಂಧಿ ಪ್ರತಿಮೆ ಬಳಿ ನಡೆಸುತ್ತಿರುವ ಮೌನ ಧರಣಿ ಸೋಮವಾರಕ್ಕೆ 145 ದಿನ ಪೂರೈಸಿದೆ.
ಮುಂಬರುವ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಮದ್ಯದ ಆಮಿಷವನ್ನು ಒಡ್ಡುವ ಸಾಧ್ಯತೆ ಇರುವುದರಿಂದ ಚುನಾವಣೆ ನಡೆಯುವ 45 ದಿನಗಳ ಮುಂಚೆಯೇ ಮದ್ಯ ಮಾರಾಟವನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಅಲ್ಲದೇ, ಒಂದು ದೇಶ ಒಂದು ಚುನಾವಣೆ ಕುರಿತು ಅಧ್ಯಯನ ನಡೆಸಲು ರಚಿಸಲಾದ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರಾದ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಪತ್ರ ಬರೆದಿರುವ ಧುತ್ತರಗಿ, ‘ಲೋಕಸಭೆ ಹಾಗೂ ರಾಜ್ಯದ ವಿವಿಧ ವಿಧಾನಸಭೆಗಳು, ವಿಧಾನಪರಿಷತ್, ಪಂಚಾಯಿತಿ, ಸ್ಥಳೀಯ ಸಂಸ್ಥೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಬೇಡಿಕೆಯನ್ನು ಯಥಾವತ್ ಜಾರಿಗೊಳಿಸಬಾರದು. ಲೋಕಸಭೆ ಹಾಗೂ ರಾಜ್ಯಗಳ ವಿಧಾನಸಭೆ, ಪಂಚಾಯಿತಿ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ಬದಲು ಲೋಕಸಭೆ ಚುನಾವಣೆಯನ್ನು ಬೇರೆ ಸಮಯದಲ್ಲಿ ನಡೆಸಬೇಕು‘ ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.