ADVERTISEMENT

ಕಳಪೆ ಕಾಮಗಾರಿ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2019, 11:53 IST
Last Updated 12 ಅಕ್ಟೋಬರ್ 2019, 11:53 IST
ಕಾಮನಳ್ಳಿ ಗ್ರಾಮದ ಕಳಪೆ ಕಾಮಗಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಆಳಂದದಲ್ಲಿ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಕಚೇರಿ ಎದುರು ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಕಾಮನಳ್ಳಿ ಗ್ರಾಮದ ಕಳಪೆ ಕಾಮಗಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಆಳಂದದಲ್ಲಿ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಕಚೇರಿ ಎದುರು ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಆಳಂದ: ತಾಲ್ಲೂಕಿನ ಕಾಮನಳ್ಳಿ ಗ್ರಾಮದಲ್ಲಿ ಗ್ರಾಮೀಣ ವಿಕಾಸ ಯೋಜನೆಯಡಿ ಕೈಗೊಂಡ ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿ ಸಹಾಯಕ ಕಾರ್ಯನಿರ್ವಹಾಕ ಎಂಜಿನಿಯರ್‌ ಕಚೇರಿ ಎದುರು ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ತಾಲ್ಲೂಕು ಅಧ್ಯಕ್ಷ ಬಸವರಾಜ ಕೊರಳ್ಳಿ ಮಾತನಾಡಿ, ‘₹50 ಲಕ್ಷ ವೆಚ್ಚದ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ. ಇದಕ್ಕೆ ಕಾರಣರಾದ ಸಹಾಯಕ ಎಂಜಿನಿಯರ್‌ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿನಾಥ ಸಾರವಾಡ ಮಾತನಾಡಿ, ‘ತಾಲ್ಲೂಕಿನ ವಿವಿಧೆಡೆ ನಕಲಿ ದಾಖಲೆ ಸೃಷ್ಟಿಸಿ ಕಳಪೆ ಕಾಮಗಾರಿ ಮೇಲೆ ಅನುದಾನ ಎತ್ತಿ ಹಾಕಲಾಗುತ್ತಿದೆ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು’ ಎಂದು ಅವರು ಆಗ್ರಹಿಸಿದರು.

ADVERTISEMENT

ತಾಲ್ಲೂಕು ಪಂಚಾಯಿತಿ ಅಧಿಕಾರಿ ಸಂತೋಷ ಮನವಿ ಪತ್ರ ಸ್ವೀಕರಿಸಿದರು. ಮುಖಂಡರಾದ ಸುರೇಶ ನೆಲ್ಲೂರೆ, ಗುಂಡೆರಾವ ಮಂಟಗಿ, ಸಂಗಣ್ಣಗೌಡ ಪಾಟೀಲ, ಲಿಂಗರಾಜ ಪಾಟೀಲ, ಸಿದ್ದುಗೌಡ ಕಿಣಿಗಿ, ನಾಗರಾಜ ಘೋಡಕೆ, ಬಸವರಾಜ ಕುಂಬಾರ, ಅಭಿಷೇಕ ಹಿರೇಮಠ, ಅಜಿತ ಪಾಟೀಲ, ಶಿವಲಿಂಗಪ್ಪ ಪಟ್ಟಣಶೆಟ್ಟಿ, ಅಮಿತ್ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.