ADVERTISEMENT

ಖರ್ಗೆಗೆ ಜೀವ ಬೆದರಿಕೆ ಖಂಡಿಸಿ ಪ್ರತಿಭಟನೆ

ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಪ್ರತಿಕೃತ ದಹನ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 16:40 IST
Last Updated 12 ಜೂನ್ 2020, 16:40 IST
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಪ್ಯಾಂಥರ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಪ್ಯಾಂಥರ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ಕಲಬುರ್ಗಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ, ನೂತನ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಾಸಕ ಪ್ರಿಯಾಂಕ್‌ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಖರ್ಗೆ ಅವರ ಬಗ್ಗೆ ವ್ಯಂಗ್ಯವಾಡಿದ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಭಾರತೀಯ ದಲಿತ ಪ್ಯಾಂಥರ್‌ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

‘ರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸಿದ ಧೀಮಂತ ನಾಯಕರಿಗೆ ಜೀವ ಬೆದರಿಕೆ ಹಾಕಿರುವುದು ಖಂಡನೀಯ. ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದ ಸಂದರ್ಭದಲ್ಲಿ ಆಡಳಿತ ಪಕ್ಷದ ತಪ್ಪು ನಿರ್ಧಾರಗಳನ್ನು ಗಟ್ಟಿ ಧ್ವನಿಯಲ್ಲಿ ವಿರೋಧಿಸಿ, ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಇದರಿಂದ ವಿಚಲಿತರಾದ ಕಿಡಿಗೇಡಿಗಳು ಜೀವ ಬೆದರಿಕೆಯಂತಹ ಹೀನಕೃತ್ಯಕ್ಕೆ ಕೈ ಹಾಕಿದ್ದಾರೆ’ ಎಂದು ಟೀಕಿಸಿದರು.

ದಲಿತ ಪ್ಯಾಂಥರ್ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಪ್ಪ ಹೊಸಮನಿ, ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಡಿ. ಚಿಮ್ಮಾಇದ್ಲಾಯಿ, ಪ್ರಧಾನ ಕಾರ್ಯದರ್ಶಿ ಕಲ್ಯಾಣರಾವ ಡೊಣ್ಣೂರ, ಸಹ ಕಾರ್ಯದರ್ಶಿ ಕಾಶಿನಾಥ ದಿವಂಟಗಿ, ಉಪಾಧ್ಯಕ್ಷ ಶರಣು ಉಡಗಿ, ದಿನೇಶ ಮೋಘಾ, ಸಿದ್ರಾಮ ಮೆಂಟಗಿ, ಗುರುನಾಥ ದೊಡ್ಡಮನಿ, ಗಂಗಾಧರ ಮಾಡಬೂಳ, ಬಸವರಾಜ ಹೆಗಡೆ, ಕಾಶಿನಾಥ ಶೆಳ್ಳಗಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.