ADVERTISEMENT

ಸರ್ಕಾರದ ವೈಫಲ್ಯ ಖಂಡಿಸಿ ನಾಳೆ ಕಾಂಗ್ರೆಸ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2019, 13:07 IST
Last Updated 7 ನವೆಂಬರ್ 2019, 13:07 IST

ಕಲಬುರ್ಗಿ:ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ವೈಫಲ್ಯ ಹಾಗೂ ಜನವಿರೋಧಿ ನೀತಿಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇದೇ 9ರಂದು ಬೆಳಿಗ್ಗೆ 10.30ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಜಗತ್ ವೃತ್ತದಿಂದ ಮೆರವಣಿಗೆ ಮೂಲಕ ಹೊರಟು ಸರ್ದಾರ ವಲ್ಲಭಬಾಯಿ ಪಟೇಲ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೆರಳಿ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಪತ್ರ ಸಲ್ಲಿಸಲಾಗುವದು. ಪಕ್ಷದ ಎಲ್ಲ ಜನಪ್ರತಿನಿಧಿಗಳು, ಎಲ್ಲ ಸದಸ್ಯರು ಭಾಗವಹಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಗದೇವ ಗುತ್ತೇದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT