ADVERTISEMENT

ಅತ್ಯಾಚಾರಿಗಳನ್ನು ಬಹಿರಂಗವಾಗಿ ನೇಣಿಗೇರಿಸಲು ಒತ್ತಾಯ

ಕಲ್ಯಾಣ ಕರ್ನಾಟಕ ಸೇನೆ ವತಿಯಿಂದ ಕಲಬುರ್ಗಿಯಲ್ಲಿ ಪ್ರತಿಭಟನಾ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2019, 12:04 IST
Last Updated 5 ಡಿಸೆಂಬರ್ 2019, 12:04 IST
ಅತ್ಯಾಚಾರಿಗಳಿಗೆ ಸಾರ್ವಜನಿಕರ ಸಮ್ಮುಖದಲ್ಲೇ ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಸೇನೆಯ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು
ಅತ್ಯಾಚಾರಿಗಳಿಗೆ ಸಾರ್ವಜನಿಕರ ಸಮ್ಮುಖದಲ್ಲೇ ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಸೇನೆಯ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು   

ಕಲಬುರ್ಗಿ: ಬಾಲಕಿಯರು ಮತ್ತು ಮಹಿಳೆಯರ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಯುತ್ತಿದ್ದು, ದುಷ್ಕರ್ಮಿಗಳಲ್ಲಿ ಭೀತಿ ಹುಟ್ಟಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಸಮ್ಮುಖದಲ್ಲೇ ಅತ್ಯಾಚಾರಿಗಳನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಸೇನೆಯ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಹೈದರಾಬಾದ್‌ನಲ್ಲಿ‍ಪಶುವೈದ್ಯೆ ಹಾಗೂ ಚಿಂಚೋಳಿ ತಾಲ್ಲೂಕಿನ ಯಾಕಾಪುರ ಗ್ರಾಮದಲ್ಲಿ ಬಾಲಕಿಯ ಮೇಲೆ ದುರುಳರು ಅತ್ಯಾಚಾರವೆಸಗಿದ್ದು, ನಾಗರಿಕ ಸಮಾಜವೇ ತಲೆ ತಗ್ಗಿಸುವಂತಾಗಿದೆ. ತಪ್ಪಿತಸ್ಥರಿಗೆ ಜೀವಾವಧಿ ಕಾರಾಗೃಹದಂತಹ ಶಿಕ್ಷೆಯನ್ನು ವಿಧಿಸುತ್ತಿದ್ದರೂ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ನಿಂತಿಲ್ಲ. ಇದಕ್ಕಾಗಿ ಲಕ್ಷಾಂತರ ಜನರ ಸಮ್ಮುಖದಲ್ಲಿ ನೇಣಿಗೇರಿಸುವ ಕಾನೂನನ್ನು ಜಾರಿಗೆ ತರಬೇಕು. ಅಂದಾಗ ಮಾತ್ರ ಭೀತಿ ಹುಟ್ಟಲು ಸಾಧ್ಯ. ಅದರಿಂದ ಇಂತಹ ಪ್ರಕರಣಗಳು ಕಡಿಮೆಯಾಗಬಹುದು ಎಂದು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ದತ್ತು ಹೈಯಾಳಕರ ಒತ್ತಾಯಿಸಿದರು.

ಸಂಘಟನೆಯ ಗೌರವ ಅಧ್ಯಕ್ಷ ಸಂಗಮೇಶ ಮಹಾಗಾಂವಕರ್, ಕಾರ್ಯದರ್ಶಿ ನವೀನ್‌ ಆಲೆಗಾಂವ, ಶರಣು ಡಿ.ಎಲ್‌, ಸಂತೋಷ ಹಾವನೂರ, ರಾಜು ಕಣಸೂರ, ಗುರಂಪಳ್ಳಿ, ಶ್ರೀದೇವಿ ಮುತ್ತಂಗಿ, ನೀಲಮ್ಮ, ಕಾವೇರಿ, ಕಾಳೇಶ ಪೂಜಾರಿ, ಬಸವರಾಜ, ಗೋವಿಂದ, ಪ್ರೇಮ, ಇರ್ಫಾನ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.