ADVERTISEMENT

ಪೋಕ್ಸೋ ಪ್ರಕರಣ ರದ್ದಿಗೆ ಆಗ್ರಹಿಸಿ ಪ್ರತಿಭಟನೆ

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಷಡ್ಯಂತ್ರ ರಚಿಸಲಾಗಿದೆ ಎಂದು ಮುಖಂಡರ ಆರೋಪ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2026, 7:28 IST
Last Updated 4 ಮಾರ್ಚ್ 2026, 7:28 IST
ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ಮೇಲಿನ ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಒತ್ತಾಯಿಸಿ ಮುತ್ಯಾನ ಭಕ್ತರು ನಾಲವಾರ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು
ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ಮೇಲಿನ ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಒತ್ತಾಯಿಸಿ ಮುತ್ಯಾನ ಭಕ್ತರು ನಾಲವಾರ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು   

ವಾಡಿ: ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ಮೇಲಿನ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಮಲ್ಲಿಕಾರ್ಜುನ ಮುತ್ಯಾ ಭಕ್ತರು ಸೋಮವಾರ ಕುಂಬಾರಹಳ್ಳಿ ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಬೆಳಿಗ್ಗೆಯೇ ರಾಷ್ಟ್ರೀಯ ಹೆದ್ದಾರಿ ಬಳಿ ಜಮಾಯಿಸಿದ್ದ ಭಕ್ತರು, ಟೈಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿ, ಮುತ್ಯಾನ ಮೇಲಿನ ಪ್ರಕರಣ ಕೈಬಿಡಬೇಕು ಎಂದು ರಾಜ್ಯ ಸರ್ಕಾರವನ್ನು ಅಗ್ರಹಿಸಿದರು.

ಸ್ಥಳೀಯ ಕೋಲಿ ಸಮಾಜದ ಮುಖಂಡ ಶಿವಕುಮಾರ ಸುಣಗಾರ ನೇತೃತ್ವದಲ್ಲಿ ಅರ್ಧ ಗಂಟೆಗೂ ಅಧಿಕ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಮುತ್ಯಾನ ವಿರುದ್ಧ ಬಹುದೊಡ್ಡ ಷಡ್ಯಂತ್ರ ನಡೆದಿದ್ದು, ಅವಸರದಲ್ಲಿ ಪೋಕ್ಸೋ ಕೇಸ್ ದಾಖಲಿಸಿ ವರ್ಚಸ್ಸಿಗೆ ಮಸಿ ಬಳಿಯಲಾಗಿದೆ ಎಂದು ಆಕ್ರೋಶ ಹೊರಹಾಕಿದರು.

ADVERTISEMENT

ಈ ವೇಳೆ ಶಿವಕುಮಾರ ಸುಣಗಾರ ಮಾತನಾಡಿ, ‘ದೊಡ್ಡ ಸ್ಥಾನದಲ್ಲಿರುವ ಮಲ್ಲಿಕಾರ್ಜುನ ಮುತ್ಯಾ ಭಕ್ತರ ಪಾಲಿನ ಆರಾಧ್ಯದೈವರಾಗಿದ್ದಾರೆ. ಮಕ್ಕಳ ಜತೆ ಮಕ್ಕಳಾಗಿ ಬೆರೆಯುವ ಅವರ ವಿರುದ್ಧ ಕಾಣದ ಕೈಗಳು ಕೆಲಸ ಮಾಡಿದ್ದು, ಕೂಡಲೇ ಪೋಕ್ಸೋ ಪ್ರಕರಣ ಕೈಬಿಡಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ನಾಲವಾರ ಉಪ ತಹಶೀಲ್ದಾರ್‌ ಮುತ್ತಪ್ಪ ಕತ್ನಳ್ಳಿ ಅವರಿಗೆ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಭೀಮರಡ್ಡಿಗೌಡ ಕುರಾಳ, ಬಸವರಾಜ ಹಡಪದ, ಮಲ್ಲಿಕಾರ್ಜುನ ಅಲ್ಲೂರ್ಕರ, ಸೋಮನಾಥ ಕುಂಚೂರ, ವೆಂಕಟೇಶ ದುರ್ಗದ, ಸಂತೋಷ ಮಳಬಾ, ಶಿವಕುಮಾರ ಜ್ಯೋಗಿ, ಲಕ್ಷ್ಮಿಕಾಂತ್ ಮಳಬಾ, ರಾಯಪ್ಪ ಪೂಜಾರಿ, ಅಂಬು ಕೋಳಿಕಟ್ಟಿ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.