ADVERTISEMENT

ಪಿಎಸ್‌ಐ ಅಕ್ರಮ: ಶಾಂತಿಬಾಯಿ, ಬಸ್ಯ ನಾಯಕ ಜಾಮೀನು ಅರ್ಜಿ ತಿರಸ್ಕೃತ

​ಪ್ರಜಾವಾಣಿ ವಾರ್ತೆ
Published 15 ಜೂನ್ 2022, 12:49 IST
Last Updated 15 ಜೂನ್ 2022, 12:49 IST
ಶಾಂತಿಬಾಯಿ–ಬಸ್ಯ ನಾಯಕ
ಶಾಂತಿಬಾಯಿ–ಬಸ್ಯ ನಾಯಕ   

ಕಲಬುರಗಿ: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಅಭ್ಯರ್ಥಿ ಶಾಂತಿಬಾಯಿ ಹಾಗೂ ಅವರ ಪತಿ ಬಸ್ಯ ನಾಯಕ ಅವರ ಜಾಮೀನು ಅರ್ಜಿಯನ್ನು ಇಲ್ಲಿನ ಮೂರನೇ ಜೆಎಂಎಫ್‌ಸಿ ನ್ಯಾಯಾಲಯ ಬುಧವಾರ ತಿರಸ್ಕರಿಸಿದೆ.

ಪ್ರಕರಣ ಬೆಳಕಿಗೆ ಬಂದಾಗಿನಿಂದ ಹೈದರಾಬಾದ್‌ನಲ್ಲಿ ಇಬ್ಬರು ಮಕ್ಕಳೊಂದಿಗೆ ತಲೆಮರೆಸಿಕೊಂಡಿದ್ದ ದಂಪತಿಯನ್ನು ಮೇ 31ರಂದು ಸಿಐಡಿ ಪೊಲೀಸರು ಬಂಧಿಸಿ ಕರೆತಂದಿದ್ದರು. ವಿಚಾರಣೆ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀನಿವಾಸ್ ಕೆ.ಆರ್. ಅವರು ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.

ಸಿಐಡಿ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಶಿವಶರಣಪ್ಪ ಹೋತಪೇಟ ಹಾಜರಾಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.