ಕಲಬುರಗಿ: ಪಿಎಸ್ಐ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಅಫಜಲಪುರ ಶಾಸಕ ಎಂ.ವೈ.ಪಾಟೀಲ ಅವರ ಗನ್ ಮ್ಯಾನ್ ಹಯ್ಯಾಳಿ ದೇಸಾಯಿ ಹಾಗೂ ಸಿಎಆರ್ ಪೊಲೀಸ್ ಕಾನ್ ಸ್ಟೆಬಲ್ ರುದ್ರಗೌಡ ಪಾಟೀಲ ಎಂಬುವವರನ್ನು ಗುರುವಾರ ಬಂಧಿಸಿದ್ದಾರೆ.
ಇದರೊಂದಿಗೆ ಬಂಧಿತರ ಸಂಖ್ಯೆ ಒಂಬತ್ತಕ್ಕೆ ಏರಿದೆ. ಈಗಾಗಲೇ ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮೂವರು ಪರೀಕ್ಷಾ ಮೇಲ್ವಿಚಾರಕಿಯರು, ಮೂವರು ಅಭ್ಯರ್ಥಿಗಳು ಹಾಗೂ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಪತಿ ರಾಜೇಶ್ ಹಾಗರಗಿಯನ್ನು ಬಂಧಿಸಿದ್ದಾರೆ.
ಶಾಸಕರೊಂದಿಗೆ ಕಾರಿನಲ್ಲಿ ನಗರದ ರಾಮಮಂದಿರ ಬಳಿ ಹೊರಟಿದ್ದಾಗ ಸಿಐಡಿ ಪೊಲೀಸರು ಗನ್ ಮ್ಯಾನ್ ಹಯ್ಯಾಳಿಯನ್ನು ವಶಕ್ಕೆ ಪಡೆದರು.
ಬಂಧಿತ ಗನ್ ಮ್ಯಾನ್ ಹಯ್ಯಾಳಿ (ಅಯ್ಯಣ್ಣ) ದೇಸಾಯಿ ಪಿಎಸ್ಐ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಆಯ್ಕೆಯಾಗಿದ್ದ ಎಂದು ತಿಳಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.