ADVERTISEMENT

ಪಿಎಸ್ಐ ನೇಮಕಾತಿ ಅಕ್ರಮ: ಶಹಾಬಾದ್ ನಗರಸಭೆ ಸಿಬ್ಬಂದಿ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2022, 13:34 IST
Last Updated 28 ಏಪ್ರಿಲ್ 2022, 13:34 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಲಬುರಗಿ: ಪಿಎಸ್ಐ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಶಹಾಬಾದ್ ‌ನಗರಸಭೆ ಸಿಬ್ಬಂದಿ ಜ್ಯೋತಿ ಪಾಟೀಲ ಎಂಬುವವರನ್ನು ಸಿಐಡಿ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ.

ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್ ‌ಮಾಧ್ಯಮ ಶಾಲೆಯಲ್ಲಿನ ಕೇಂದ್ರದಲ್ಲಿ ಪರೀಕ್ಷೆ ಬರೆದ ಸೇಡಂನ ಶಾಂತಿಬಾಯಿ ಬಸ್ಯನಾಯ್ಕ ಎಂಬುವವರಿಗೆ ಬ್ಲೂಟೂತ್ ಮೂಲಕ ಉತ್ತರ ಹೇಳುವಲ್ಲಿ ಸಹಕರಿಸಿದ ಆರೋಪ‌ ಇವರ ಮೇಲಿದೆ.

ಮುಖ್ಯಮಂತ್ರಿ ಅವರ ಅಧೀನದಲ್ಲಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಕೆಲ ಕಾಲ ಕೆಲಸ ಮಾಡಿ ಇತ್ತೀಚೆಗೆ ‌ಶಹಾಬಾದ್ ನಗರಸಭೆಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದರು ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.