ADVERTISEMENT

ವ್ಯಕ್ತಿ ಕೊಲೆ: ಜೀವಾವಧಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 3:34 IST
Last Updated 4 ಆಗಸ್ಟ್ 2021, 3:34 IST

ಕಲಬುರ್ಗಿ:‌ಆಳಂದ ತಾಲ್ಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ 2018ರಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಅಪರಾಧಿಗೆ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದೆ.

ಮಾದನಹಿಪ್ಪರಗಾದ ಶ್ರೀಶೈಲ ಸಿದ್ಧಪ್ಪ ವಗ್ಗಿ ಶಿಕ್ಷೆಗೆ ಒಳಗಾದ ವ್ಯಕ್ತಿ. ಇದೇ ಗ್ರಾಮದ ಮಲ್ಲಿನಾಥ ಎನ್ನುವವರನ್ನು ಚಾಕು ಇರಿದು ಕೊಲೆ ಮಾಡಿದ್ದ. ಇದನ್ನು ಕಂಡು ಮಲ್ಲಿನಾಥ ಅವರ ಸಹೋದರ ಶಾಂತಮಲ್ಲಪ್ಪ ನಿಂಗಣ್ಣ ಜಿಡ್ಡಿಮನಿ ಅವರು ದೂರು ನೀಡಿದ್ದರು. ಆಳಂದ ಸಿಪಿಐ ಎಚ್‌.ಬಿ. ಸಣ್ಣಮನಿ ಅವರು ಆರೋಪಿಯನ್ನು ಬಂಧಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶರಾದ ಶುಕ್ಲಾಕ್ಷ ಪಾಲನ್‌ ಅವರು, ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ADVERTISEMENT

ಸರ್ಕಾರ ಪರವಾಗಿ 1ನೇ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಎಸ್.ಆರ್. ನರಸಿಂಹಲು ಅವರು ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.