ADVERTISEMENT

ಪ್ರೌಢಶಾಲಾ ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2022, 10:31 IST
Last Updated 11 ಆಗಸ್ಟ್ 2022, 10:31 IST

ಕಲಬುರಗಿ: ಮಕ್ಕಳಲ್ಲಿ ವಿಜ್ಞಾನದ ಅಭಿರುಚಿ ಹಾಗೂ ಕುತೂಹಲ ಹುಟ್ಟಿಸುವ ಆಶಯದಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಸರ್ ಸಿ.ವಿ. ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿಯ ಅಧ್ಯಕ್ಷ ಡಾ.ಎಸ್.ಎಸ್. ಪಾಟೀಲ ತಿಳಿಸಿದ್ದಾರೆ .

ಜಿಲ್ಲಾಮಟ್ಟದ ವಿಜ್ಞಾನ ರಸ ಪ್ರಶ್ನೆ ಸ್ಪರ್ಧೆಯು ಅಗಸ್ಟ್ 20ರಂದು ಕರುಣೇಶ್ವರ ನಗರದಲ್ಲಿರುವ ಹೈಕೋರ್ಟ್ ರಿಂಗ್ ರಸ್ತೆಯ ವಿವೇಕಾನಂದ ವಿದ್ಯಾನಿಕೇತನ ಶಾಲೆಯಲ್ಲಿ ಆಯೋಜಿಸಲಾಗುತ್ತಿದೆ .

ಸ್ಪರ್ಧೆಯಲ್ಲಿ ಪ್ರತಿ ಶಾಲೆಯಿಂದ 9 ಅಥವಾ 10ನೇ ತರಗತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಅಭ್ಯಸಿಸುತ್ತಿರುವ ಇಬ್ಬರು ವಿದ್ಯಾರ್ಥಿಗಳ ಒಂದು ತಂಡಕ್ಕೆ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ. ಜಿಲ್ಲಾಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ ₹ 3 ಸಾವಿರ, ದ್ವಿತೀಯ ಬಹುಮಾನ ₹ 2 ಸಾವಿರ ನಗದು ಬಹುಮಾನದೊಂದಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಗುವುದು. ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಅಭಿನಂದನಾ ಪತ್ರ ನೀಡಿ ಗೌರವಿಸಲಾಗುವುದು .

ADVERTISEMENT

ಸ್ಪರ್ಧೆಯ ಕುರಿತು ಮಾಹಿತಿಗಾಗಿ ಸ್ಪರ್ಧೆಯ ಜಿಲ್ಲಾ ಸಂಯೋಜಕ, ಕರಾವಿಪ ಖಜಾಂಚಿ ಚಂದ್ರಶೇಖರ ಪಾಟೀಲ (94485 79782) ಅವರನ್ನು ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.