
ಆಳಂದ: ‘ವಿದ್ಯಾರ್ಥಿಗಳು ಪರೀಕ್ಷೆ ಸಂದರ್ಭದಲ್ಲಿ ಮಾತ್ರ ಅಭ್ಯಾಸ ಕೈಗೊಳ್ಳದೇ ನಿರಂತರ ಅಧ್ಯಯನಶೀಲತೆ ಗುಣ ಬೆಳೆಸಿಕೊಂಡರೆ ಪರೀಕ್ಷೆಗಳಲ್ಲಿ ಸಾಧನೆ ಸಾಧ್ಯವಿದೆ’ ಎಂದು ಸಮತಾಲೋಕ ಶಿಕ್ಷಣ ಸಮಿತಿ ಆಡಳಿತಾಧಿಕಾರಿ ಮಹಾದೇವಪ್ಪ ಪಾಟೀಲ ತಿಳಿಸಿದರು.
ಪಟ್ಟಣದ ಸಂಬುದ್ಧ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಕಾಲೇಜಿನಲ್ಲಿ ಶುಕ್ರವಾರ ಆಳಂದ ತಾಲ್ಲೂಕುಮಟ್ಟದ ಪಿಯು ದ್ವಿತೀಯ ವಿದ್ಯಾರ್ಥಿಗಳ ಪಠ್ಯಾಧಾರಿತ ರಸಪ್ರಶ್ನೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಪಿಯು ಕಾಲೇಜಿನ ಪ್ರಾಚಾರ್ಯ ಪಂಡಿತರಾವ ಪಾಟೀಲ ಮಾತನಾಡಿ, ‘ಎಸ್‌ಎಸ್‌ಎಲ್‌ಸಿ, ಪಿಯು ಪರೀಕ್ಷೆ ಬಗೆಗೆ ಭಯ ಬೇಡ. ಇಂತಹ ಸ್ಪರ್ಧೆಗಳು ಓದುವ ಹವ್ಯಾಸ ಬೆಳೆಸಲು ಸಹಾಯಕವಾಗಲಿವೆ’ ಎಂದು ಹೇಳಿದರು.
ಸರ್ಕಾರಿ ಕನ್ಯಾ ಪಿಯು ಕಾಲೇಜಿನ ಉಪನ್ಯಾಸಕ ಶ್ರೀಶೈಲ ಮಾಳಗೆ ಮಾತನಾಡಿ, ‘ಪಿಯು ದ್ವಿತೀಯ ಪರೀಕ್ಷೆಯು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ದಿಕ್ಸೂಚಿಯಾಗಲಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಅವಕಾಶಗಳು ಲಭಿಸಲು ಜ್ಞಾನದ ಹಸಿವು, ವಿಸ್ತಾರ ಬೆಳೆಸಿಕೊಳ್ಳಬೇಕು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.