ADVERTISEMENT

ಕಲಬುರಗಿಯ ಆಡಕಿ ಗ್ರಾಮದಲ್ಲಿ ಪಾದಯಾತ್ರೆ ನಡೆಸಿದ ಸಚಿವ ಆರ್ ಅಶೋಕ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2022, 8:48 IST
Last Updated 20 ಆಗಸ್ಟ್ 2022, 8:48 IST
ಕಲಬುರಗಿಯ ಆಡಕಿ ಗ್ರಾಮದಲ್ಲಿ ಪಾದಯಾತ್ರೆ ನಡೆಸಿದ ಸಚಿವ ಆರ್ ಅಶೋಕ
ಕಲಬುರಗಿಯ ಆಡಕಿ ಗ್ರಾಮದಲ್ಲಿ ಪಾದಯಾತ್ರೆ ನಡೆಸಿದ ಸಚಿವ ಆರ್ ಅಶೋಕ   

ಕಲಬುರಗಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಗ್ರಾಮ ವಾಸ್ತವ್ಯ ನಡೆಸಲಿರುವ ಕಂದಾಯ ಸಚಿವ ಆರ್. ಅಶೋಕ ಅವರು ಸೇಡಂ ತಾಲ್ಲೂಕಿನ ಆಡಕಿ ಗ್ರಾಮದಲ್ಲಿ ಪಾದಯಾತ್ರೆ ನಡೆಸಿದರು.

ಬೆಳಿಗ್ಗೆ 11ಕ್ಕೆ ಸಚಿವರನ್ನು ಕುಂಭಮೇಳದ ಮೂಲಕ ಸ್ವಾಗತಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಸೇಡಂನಿಂದ ಆಡಕಿ ಗ್ರಾಮದವರೆಗೆ ಬಿಜೆಪಿ ಕಾರ್ಯಕರ್ತರು ಆಯೋಜಿಸಿದ್ದ ಬೈಕ್ ಮೆರವಣಿಗೆಗೆ ಚಾಲನೆ ನೀಡಿ ಗ್ರಾಮ ತಲುಪುವಷ್ಟರಲ್ಲಿ ಮಧ್ಯಾಹ್ನ 1.30 ಆಗಿತ್ತು. ಹೀಗಾಗಿ ಗ್ರಾಮದ ಹೊರವಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹೀಗಾಗಿ ಅವಸರದಲ್ಲಿಯೇ ಗ್ರಾಮದ ಅಗಸಿಯಿಂದ ಕಸ್ತೂರಿ ರಂಗನಾಥ ದೇವಾಲಯದವರೆಗೆ ಪಾದಯಾತ್ರೆ ನಡೆಸಿದರು.

ಈ ಸಂದರ್ಭದಲ್ಲಿ ಸಂಸದ ಡಾ.ಉಮೇಶ ಜಾಧವ, ಸೇಡಂ ಶಾಸಕರೂ ಆದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆದ ರಾಜಕುಮಾರ ಪಾಟೀಲ ತೇಲ್ಕೂರ, ಶಾಸಕ ಬಸವರಾಜ ಮತ್ತಿಮೂಡ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ, ಪ್ರಾದೇಶಿಕ ಆಯುಕ್ತ ಡಾ.ಎನ್.ವಿ. ಪ್ರಸಾದ್, ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್, ಜಿ.ಪಂ. ಸಿಇಒ ಡಾ. ಗಿರೀಶ್ ಡಿ. ಬದೋಲೆ, ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಯಾನಂದ ‌ಪಾಟೀಲ, ಉಪ ವಿಭಾಗಾಧಿಕಾರಿ ಕಾರ್ತಿಕ್, ಇತರರು ಈ ಸಂದರ್ಭದಲ್ಲಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.