ಕಲಬುರಗಿ: ಗ್ರಾಮ ವಾಸ್ತವ್ಯಕ್ಕಾಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಆಡಕಿ ಗ್ರಾಮಕ್ಕೆ ಶನಿವಾರ ಬಂದಿರುವ ಕಂದಾಯ ಸಚಿವ ಆರ್. ಅಶೋಕ ಅವರು ಭಾನುವಾರ ಬೆಳಿಗ್ಗೆ ಗ್ರಾಮದ ಪರಿಶಿಷ್ಟ ಸಮುದಾಯದ ದಶರಥ ರಾಠೋಡ ಅವರ ಮನೆಯಲ್ಲಿ ಊಟ ಮಾಡಿದರು.
ಸ್ಥಳೀಯ ಶಾಸಕರೂ ಆದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ, ಜಿಲ್ಲಾಧಿಕಾರಿ
ಯಶವಂತ ವಿ. ಗುರುಕರ್ ಜೊತೆ ಜೋಳದ ರೊಟ್ಟಿ ಊಟ ಸವಿದರು.
ದಶರಥ ರಾಠೋಡ ಮತ್ತು ವಿಮಲಾಬಾಯಿ ರಾಠೋಡ ಸಚಿವರಿಗೆ ಊಟ ಬಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.