ADVERTISEMENT

ಸೈಯದ್ ನಾಸಿರ್ ಹುಸೇನ್ ವಜಾಕ್ಕೆ ಆರ್. ಅಶೋಕ ಒತ್ತಾಯ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2024, 14:03 IST
Last Updated 4 ಮಾರ್ಚ್ 2024, 14:03 IST
<div class="paragraphs"><p>ಆರ್. ಅಶೋಕ</p></div>

ಆರ್. ಅಶೋಕ

   

ಕಲಬುರಗಿ: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಆರೋಪದಡಿ ಬಂಧಿತರಾದ ಮೂವರಿಗೆ ಪಾಸ್ ಕೊಟ್ಟಿರುವ ರಾಜ್ಯಸಭೆ ಸದಸ್ಯ ಸೈಯದ್ ನಾಸಿರ್ ಹುಸೇನ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾ ಮಾಡಬೇಕು. ರಾಜ್ಯಸಭಾ ಸದಸ್ಯತ್ವವನ್ನು ಅಸಿಂಧುಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಒತ್ತಾಯಿಸಿದರು.

ಜಿಲ್ಲೆಯ ಆಳಂದ ತಾಲ್ಲೂಕಿನ ಹಿರೋಳ್ಳಿ ಗ್ರಾಮದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಖಾಸಗಿ ಸಂಸ್ಥೆಯಿಂದ ಪಡೆದ ಎಫ್ ಎಸ್ ಎಲ್ ವರದಿ ಸುಳ್ಳು ಎನ್ನುವುದಾದರೆ ಮೂವರನ್ನು ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದರು.

ADVERTISEMENT

ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದಲ್ಲಿ ಈ ರೀತಿಯ ದೇಶವಿರೋಧಿ ಘೋಷಣೆ ಕೂಗುವುದು ಖಂಡನೀಯ. ಇನ್ನೂ 10ರಿಂದ 12 ಜನ ಘೋಷಣೆ ಕೂಗಿರುವ ಮಾಹಿತಿ ಇದ್ದು, ಅವರನ್ನೂ ಬಂಧಿಸಬೇಕು ಎಂದು ಒತ್ತಾಯಿಸಿದರು.

ಅಧಿಕಾರಕ್ಕೆ ಬಂದಾಗಿನಿಂದ ದೇಶದ್ರೋಹಿ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸುವಂತೆ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ಅಶೋಕ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.