
ಕಲಬುರಗಿ: ಕಲಬುರಗಿಯಲ್ಲಿ ರೈಲ್ವೆ ವಿಭಾಗೀಯ ಕಚೇರಿ ಸ್ಥಾಪನೆ ಸೇರಿದಂತೆ ಐದು ಬೇಡಿಕೆಗಳನ್ನು ಈಡೇರಿಸುವಂತೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ವಿಧಾನಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ ನವದೆಹಲಿಯಲ್ಲಿ ಬುಧವಾರ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
‘ಕಲಬುರಗಿಯಲ್ಲಿ ರೈಲ್ವೆ ವಿಭಾಗೀಯ ಕಚೇರಿ ಸ್ಥಾಪನೆ, ಕಲಬುರಗಿ–ಬೆಂಗಳೂರು ನಡುವೆ ಹೊಸ ರೈಲು ಓಡಿಸಬೇಕು, ಬೀದರ್‌ನಿಂದ ಕಲಬುರಗಿ, ಯಾದಗಿರಿ, ರಾಯಚೂರು, ಗುಂತಕಲ್, ಬಳ್ಳಾರಿ, ಹೊಸಪೇಟೆ, ಕೊಪ್ಪಳ, ಗದಗ, ಹುಬ್ಬಳ್ಳಿ ಮಾರ್ಗವಾಗಿ ಬೆಳಗಾವಿಗೆ ಹೊಸ ರೈಲು ಬಿಡಬೇಕು, ಪ್ರಾದೇಶಿಕ ಅಸಮಾನತೆ ನಿರ್ಮೂಲನೆಗೆ ಉನ್ನತಾಧಿಕಾರ ಸಮಿತಿ ಶಿಫಾರಸು ಮಾಡಿದಂತೆ ಕಲ್ಯಾಣ ಕರ್ನಾಟಕ–ಕಿತ್ತೂರು ಕರ್ನಾಟಕ ಬೆಸೆಯಲು ಕಲಬುರಗಿ–ಬೆಳಗಾವಿ ನಡುವೆ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಕ್ರಮವಹಿಸಬೇಕು. ಬೀದರ್–ಕಲಬುರಗಿ ನಡುವಣ ಮಹಾಗಾಂವ ನಿಲ್ದಾಣದಲ್ಲಿ ರೈಲು ನಿಲುಗಡೆ ಕ್ರಮವಹಿಸಬೇಕು’ ಎಂದು ಮನವಿಯಲ್ಲಿ ಅಮರನಾಥ ಪಾಟೀಲ ಒತ್ತಾಯಿಸಿದ್ದಾರೆ.
ಮನವಿ ಸಲ್ಲಿಕೆ ವೇಳೆ ವಕೀಲ ಲಕ್ಷ್ಮಿಕಾಂತ ಕುಲಕರ್ಣಿ ಜೊತೆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.