ಸೇಡಂ: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಸಕಾಲಕ್ಕೆ ಸುರಿದ ಪರಿಣಾಮ ಮುಂಗಾರು ಬೆಳೆಗಳು ಹುಲಸಾಗಿ ಬೆಳೆದಿವೆ. ಜುಲೈ 16 ರಿಂದ ಜುಲೈ 20 ರವರೆಗೆ ಅಧಿಕ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹೆಚ್ಚು ಮಳೆ ಬಂದರೆ ಬೆಳೆಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುತ್ತದೆ. ನಿಂತ ನೀರು ಬೆಳೆನಾಶಕ್ಕೆ ಕಾರಣವಾಗುತ್ತದೆ. ಆದ್ದರಿಂದ ಬೆಳೆಗಳಲ್ಲಿ ನೀರು ನಿಲ್ಲದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು. ಒಂದು ವೇಳೆ ಹೊಲದಲ್ಲಿ ಮಳೆ ನೀರು ನಿಲ್ಲುತ್ತಿದ್ದರೆ, ಬಸಿಗಾಲುವೆ ಮೂಲಕ ಹೊರಹಾಕಿ ಬೆಳೆ ರಕ್ಷಣೆ ಮಾಡಿಕೊಳ್ಳಬೇಕು’ ಎಂದು ಸಹಾಯಕ ಕೃಷಿ ನಿರ್ದೇಶಕ ವೈ.ಎಲ್. ಹಂಪಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.