ADVERTISEMENT

ಕಲಬುರಗಿಯಲ್ಲಿ ಬಿರುಸಿನ ಮಳೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2024, 6:25 IST
Last Updated 9 ಜೂನ್ 2024, 6:25 IST
ಕಲಬುರಗಿಯಲ್ಲಿ ಶನಿವಾರ ಸುರಿದ ಧಾರಾಕಾರ ಮಳೆಯಲ್ಲಿಯೇ ಹಣ್ಣಿನ ವ್ಯಾಪಾರಿಯೊಬ್ಬರು ತಳ್ಳುಗಾಡಿಯನ್ನು ನೂಕಿಕೊಂಡು ಸಾಗಿದರು
–ಪ್ರಜಾವಾಣಿ ಚಿತ್ರ/ ತಾಜುದ್ದೀನ್‌ ಆಜಾದ್‌
ಕಲಬುರಗಿಯಲ್ಲಿ ಶನಿವಾರ ಸುರಿದ ಧಾರಾಕಾರ ಮಳೆಯಲ್ಲಿಯೇ ಹಣ್ಣಿನ ವ್ಯಾಪಾರಿಯೊಬ್ಬರು ತಳ್ಳುಗಾಡಿಯನ್ನು ನೂಕಿಕೊಂಡು ಸಾಗಿದರು –ಪ್ರಜಾವಾಣಿ ಚಿತ್ರ/ ತಾಜುದ್ದೀನ್‌ ಆಜಾದ್‌   

ಕಲಬುರಗಿ: ನಗರದಲ್ಲಿ ಶನಿವಾರ ಸಂಜೆ ಸುಮಾರು ಅರ್ಧ ಗಂಟೆ ಬಿರುಸಿನ ಮಳೆ ಸುರಿಯಿತು. ಇದರಿಂದಾಗಿ ನ್ಯೂ ಜೇವರ್ಗಿ ರಸ್ತೆ ಬಳಿಯ ಬಸ್ ಡಿಪೊ, ಎಸ್‌.ಬಿ. ಟೆಂಪಲ್ ರಸ್ತೆ, ಕೋರ್ಟ್ ಸರ್ಕಲ್, ಹಳೇ ಜೇವರ್ಗಿ ರಸ್ತೆಯ ಅಂಡರ್‌ಪಾಸ್, ಎಂಆರ್‌ಎಂಸಿ ಆಸ್ಪತ್ರೆಯ ಮುಂಭಾಗದಲ್ಲಿ ನೀರು ನಿಂತು ಅವಾಂತರ ಸೃಷ್ಟಿಸಿತು. ವಾಹನ ಸಂಚಾರಕ್ಕೆ ಅಡ್ಡಿಯಾಯಿತು.

ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿರುವುದರಿಂದ ನಗರವು ತಂಪಾಗಿದೆ. ತಾಪಮಾನ ಹಗಲು ಹೊತ್ತಿನಲ್ಲಿ 28 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ. ರಾತ್ರಿ ವೇಳೆ 24 ಡಿಗ್ರಿ ಸೆಲ್ಸಿಯಸ್‌ಗೆ ಕುಸಿಯುತ್ತಿದೆ. ಮಳೆ ಗಾಳಿಯಿಂದಾಗಿ ನಗರದ ಹಲವೆಡೆ ಶನಿವಾರವೂ ಮರಗಳು ಧರೆಗುಳಿದವು. ಮಹಾನಗರ ಪಾಲಿಕೆ, ಅರಣ್ಯ ಇಲಾಖೆ ಹಾಗೂ ಜೆಸ್ಕಾಂ ಸಿಬ್ಬಂದಿ ಮರಗಳನ್ನು ತೆರವುಗೊಳಿಸಿದರು.

ನಗರದ ಎಂಎಸ್‌ಕೆ ಮಿಲ್ ರಸ್ತೆಯಲ್ಲಿ ರಾತ್ರಿ ಬೀದಿ ದೀಪಗಳು ಬೆಳಗಲಿಲ್ಲ. ಹೀಗಾಗಿ, ವಾಹನ ಸವಾರರು, ಪಾದಚಾರಿಗಳು ಪರದಾಡಿದರು.

ADVERTISEMENT

ಜಿಲ್ಲೆಯ ಸೇಡಂ, ಚಿಂಚೋಳಿ, ಶಹಾಬಾದ್, ಯಡ್ರಾಮಿ, ಜೇವರ್ಗಿ, ಚಿತ್ತಾಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.