ಪ್ರಜಾವಾಣಿ ವಾರ್ತೆ
ಅಫಜಲಪುರ (ಕಲಬುರಗಿ ಜಿಲ್ಲೆ): ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಮೂರು ದಿನಗಳ ಹಿಂದೆ ಭೀಮಾ ನದಿಗೆ 2.24 ಲಕ್ಷ ಕ್ಯೂಸೆಕ್ ನೀರು ಹರಿಸಲಾಗಿದೆ. ನದಿ ಉಕ್ಕಿ ಹರಿಯುತ್ತಿದ್ದು, ಭಾನುವಾರವೂ ದೇವಲ ಗಾಣಗಾಪುರ ಹಾಗೂ ಘತ್ತರಗಾ ಸೇತುವೆಗಳು ಮುಳುಗಿದ್ದರಿಂದ ಸಂಚಾರ ಸ್ಥಗಿತಗೊಂಡಿತ್ತು.
ಸದ್ಯಕ್ಕೆ 15 ಗೇಟ್ ಮುಖಾಂತರ 80 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಅಫಜಲಪುರ ತಾಲ್ಲೂಕಿನ ಸುಕ್ಷೇತ್ರ ಗಾಣಗಾಪುರದಿಂದ ಜೇವರ್ಗಿ ತಾಲ್ಲೂಕಿನ ಕೆಲ ಗ್ರಾಮಗಳು ಹಾಗೂ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.