
ಕಲಬುರಗಿ: ಆಳಂದ ಪಟ್ಟಣದ ಲಾಡ್ಲೆಮಶಾಕ್ ದರ್ಗಾದಲ್ಲಿನ ರಾಘವ ಚೈತನ್ಯ ಶಿವಲಿಂಗಕ್ಕೆ ಇದೇ 26ರಂದು ಶಿವರಾತ್ರಿಯ ಅಂಗವಾಗಿ ಪೂಜೆ ಸಲ್ಲಿಸಲು ನಿರ್ಧರಿಸಿದ್ದು, 500 ಜನರಿಗೆ ಅವಕಾಶ ನೀಡಬೇಕು ಎಂದು ಶ್ರೀರಾಮಸೇನೆಯ ರಾಜ್ಯ ಘಟಕದ ಅಧ್ಯಕ್ಷ ಆಂದೋಲಾ ಕರುಣೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ ಜಿಲ್ಲಾಧಿಕಾರಿ ಅವರಿಗೆ ಕೋರಿಕೆ ಸಲ್ಲಿಸಿದ್ದಾರೆ.
ಈ ಕುರಿತು ಲಿಖಿತ ಪತ್ರ ನೀಡಿರುವ ಸ್ವಾಮೀಜಿ, ‘ಪ್ರತಿ ವರ್ಷದಂತೆ ಈ ವರ್ಷದ ಶಿವರಾತ್ರಿಯ ಸಂದರ್ಭದಲ್ಲಿ ವಾಡಿಕೆಯಂತೆ ರಾಘವ ಚೈತನ್ಯ ಲಿಂಗಕ್ಕೆ ಪೂಜೆ ಸಲ್ಲಿಸಲು ಬಯಸಿದ್ದೇವೆ. ಅದಕ್ಕಾಗಿ ಅಂದು ಮಧ್ಯಾಹ್ನ 3ರಿಂದ ಸಂಜೆ 6ರವರೆವಗೆ ಜಿಲ್ಲೆಯ ಮಠಾಧೀಶರು ಸೇರಿದಂತೆ ಸಾರ್ವಜನಿಕರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.
ಕಳೆದ ವರ್ಷದ ಶಿವರಾತ್ರಿಯಂದು ನ್ಯಾಯಾಲಯವು ಆಂದೋಲಾ ಸ್ವಾಮೀಜಿ ಸೇರಿದಂತೆ 15 ಜನರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.