
ಜೇವರ್ಗಿ: ಕಾಳಸಂತೆ ದಂಧೆಕೋರರು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಆಹಾರ ಇಲಾಖೆಯ ಅಧಿಕಾರಿಗಳು ಈಚೆಗೆ ವಶಕ್ಕೆ ಪಡೆದುಕೊಂಡಿದ್ದಾರೆ.
ಪಟ್ಟಣದಲ್ಲಿ ವಿವಿಧ ಬಡಾವಣೆಗಳಲ್ಲಿ ಮನೆಮನೆಗೆ ತೆರಳಿ ಬಡವರಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಈ ಕಾಳಸಂತೆ ದಂಧೆ ಮಾಡುವವರು ಖರೀದಿಸುತ್ತಾರೆ. ಇಂತಹವರ ಬಗ್ಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ಪಟ್ಟಣದ ಜೋಪಡಪಟ್ಟಿ ಬಡಾವಣೆಯ ಅಂಗಡಿಯೊಂದರ ಮೇಲೆ ದಾಳಿ ಮಾಡಿದ ಆಹಾರ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 12 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಆಹಾರ ನಿರೀಕ್ಷಕಿ ಸುರೇಖಾ ನಡಗೇರಿ ಹಾಗೂ ಸಿಬ್ಬಂದಿ ದಾಳಿ ನಡೆಸಿ ಅಕ್ಕಿ ಜಪ್ತಿ ಮಾಡಿ, ಅಂಗಡಿ ಮಾಲೀಕರ ವಿರುದ್ಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.