
ಪ್ರಜಾವಾಣಿ ವಾರ್ತೆ
ಆರ್.ಬಿ.ತಿಮ್ಮಾಪುರ
ಕಲಬುರಗಿ: ‘ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಸಂತ್ರಸ್ತರಿಗೆ ಸರ್ಕಾರ ಘೋಷಿಸಿರುವ ಪರಿಹಾರ ವಿತರಣೆಗೆ ದಿನಾಂಕ ಚರ್ಚಿಸಲಾಗುತ್ತಿದೆ. ಮುಖ್ಯಮಂತ್ರಿ ಪರಿಹಾರ ವಿತರಿಸುವರು. ಹಿಂದೆ ಸರಿವ ಪ್ರಶ್ನೆಯೇ ಇಲ್ಲ’ ಎಂದು ಸಚಿವ ಆರ್.ಬಿ.ತಿಮ್ಮಾಪುರ ಭಾನುವಾರ ಹೇಳಿದರು.
ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಕೃಷ್ಣಾ ಮೇಲ್ದಂಡೆ ಯೋಜನೆಯ ಭೂ ಸಂತ್ರಸ್ತರಿಗೆ ಎಕರೆ ನೀರಾವರಿ ಜಮೀನಿಗೆ ₹ 40 ಲಕ್ಷ, ಒಣಬೇಸಾಯ ಜಮೀನಿಗೆ ₹ 30 ಲಕ್ಷ ಪರಿಹಾರ ಘೋಷಿಸಿದ್ದೇವೆ’ ಎಂದು ಹೇಳಿದರು.
ಬಿಜೆಪಿಯವರಿಗೆ ಈತನಕ ಅಧಿಸೂಚನೆ ಹೊರಡಿಸಲು ಸಾಧ್ಯವಾಗಿಲ್ಲ. ಮಹಾದಾಯಿ ಯೋಜನೆಗೆ ಪರಿಸರ ಸಚಿವಾಲಯದ ಅನುಮತಿ ಕೊಡಿಸಲು ಆಗಿಲ್ಲ. ಅವರಿಗೆ ಏನು ನೈತಿಕತೆ ಇದೆ. ಅಧಿವೇಶನದಲ್ಲಿ ಇವರೇನು ಉತ್ತರ ಕರ್ನಾಟಕದ ಸಮಸ್ಯೆ ಚರ್ಚಿಸುತ್ತಾರೆ?’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.