ಕಲಬುರಗಿ: ‘ಇಂದು ಮನುಷ್ಯರಲ್ಲಿ ಮನುಷ್ಯತ್ವವೇ ಕಡಿಮೆಯಾಗುತ್ತಿದೆ. ಪ್ರತಿಯೊಬ್ಬರೂ ವಿಶೇಷವಾಗಿ ಯುವಜನರು ಸೇವಾ ಮನೋಭಾವ ರೂಢಿಸಿಕೊಳ್ಳಬೇಕು’ ಎಂದು ನೂತನ ವಿದ್ಯಾಲಯ ಪದವಿ ಕಾಲೇಜಿನ ಐಕ್ಯುಎಸಿ ಸಂಯೋಜಕ ಪ್ರೊ. ಗೋವಿಂದ ಪೂಜಾರ ಸಲಹೆ ನೀಡಿದರು.
ನಗರದ ನೂತನ ವಿದ್ಯಾಲಯ ಸಂಸ್ಥೆಯ ಎನ್.ವಿ. ಕಲಾ, ಕನ್ಹಯ್ಯಲಾಲ್ ಮಾಲು ವಿಜ್ಞಾನ ಮತ್ತು ಪಾಂಡುರಂಗರಾವ್ ಪತ್ಕಿ ವಾಣಿಜ್ಯ ಕಾಲೇಜಿನ ರೆಡ್ ಕ್ರಾಸ್ ಘಟಕ ಹಾಗೂ ಐಕ್ಯುಎಸಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ರೆಡ್ ಕ್ರಾಸ್ ಡೇ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರೆಡ್ ಕ್ರಾಸ್ ಸಂಸ್ಥೆಯ ಉಗಮ, ವಿಕಾಸ ಹಾಗೂ ಸೇವಾ ಮನೋಭಾವದ ಮಹತ್ವದ ಬಗೆಗೆ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಉಪಪ್ರಾಚಾರ್ಯ ಗುರುಮಧ್ವ ನವಲಿ ಮಾತನಾಡಿದರು.
ಕಾಲೇಜಿನ ವಿದ್ಯಾರ್ಥಿಗಳು ಮತ್ತು ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಮಲ್ಲಿನಾಥ ಎಸ್. ತಳವಾರ ನಿರೂಪಿಸಿದರು. ರೆಡ್ ಕ್ರಾಸ್ ಘಟಕದ ಸಂಚಾಲಕ ಪ್ರೊ. ಜಿತೇಂದ್ರ ಕೋಥಳಿಕರ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.