
ಕಲಬುರಗಿ: ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ವೈಯಕ್ತಿಕವಾಗಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ಮಾತನಾಡಿದ ಮೈಸೂರು ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಭಾರತೀಯ ದಲಿತ ಪ್ಯಾಂಥರ್ ಸಂಘಟನೆ ಮುಖಂಡರು ಪ್ರತಿಭಟನೆ ನಡೆಸಿದರು.
‘ಪ್ರತಾಪ ಸಿಂಹ ಅವರು ಉದ್ದೇಶಪೂರ್ವಕವಾಗಿ ದಲಿತ ಸಚಿವರ ವಿರುದ್ಧ ಮೇಲಿಂದ ಮೇಲೆ ವೈಯಕ್ತಿಕ ನಿಂದನೆ ಮಾಡುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಅವರು ಕಳಂಕ ರಹಿತ ಸಚಿವರಾಗಿದ್ದು, ಅವರ ಬಗ್ಗೆ ಮಾತನಾಡಲು ಬಿಜೆಪಿ ಅವರಿಗೆ ಯಾವುದೇ ವಿಷಯವಿಲ್ಲ. ಆ ಕಾರಣಕ್ಕೆ ಸಚಿವರ ಬಗ್ಗೆ ವೈಯಕ್ತಿಕ ನಿಂದನೆ ಮಾಡುತ್ತಿದ್ದಾರೆ’ ಎಂದು ದೂರಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸಮನಿ, ಜಿಲ್ಲಾಧ್ಯಕ್ಷ ರಮೇಶ ಡಿ. ಚಿಮ್ಮಾ ಇದಲಾಯಿ, ಮಿಲಿಂದ ಸನಗುಂದಿ, ಭೀಮರಾಯ ನಗನೂರ, ದಿನೇಶ ಮೋಘಾ, ಪ್ರದೀಪ ಡೊಣ್ಣೂರ, ಕಲ್ಯಾಣರಾವ ಡೊಣ್ಣೂರ ಹಾಗೂ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.