ADVERTISEMENT

‘ಶಿಥಿಲಗೊಂಡ ಮುಖ್ಯದ್ವಾರ ದುರಸ್ತಿ ಮಾಡಿ’

​ಪ್ರಜಾವಾಣಿ ವಾರ್ತೆ
Published 8 ಜೂನ್ 2025, 15:52 IST
Last Updated 8 ಜೂನ್ 2025, 15:52 IST

ಕಲಬುರಗಿ: ಕಾಳಗಿ ತಾಲ್ಲೂಕಿನ ಟೆಂಗಳಿ ಗ್ರಾಮದ ಮುಖ್ಯದ್ವಾರ (ಅಗಸಿ) ಶಿಥಿಲಗೊಂಡಿದ್ದು, ದುರಸ್ತಿ ಮಾಡಬೇಕು ಎಂದು ಆಗ್ರಹಿಸಿ ಅಂಡಗಿ ಪ್ರತಿಷ್ಠಾನದ ಅಧ್ಯಕ್ಷ ಶಿವರಾಜ ಅಂಡಗಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಸಹಾಯಕ ನಿರ್ದೇಶಕ ರಾಜಾರಾಮ್ ಬಿ.ಸಿ ಅವರಿಗೆ ಮನವಿ ಸಲ್ಲಿಸಿದರು.

‘ಟೆಂಗಳಿ ಐತಿಹಾಸಿಕ ಗ್ರಾಮವಾಗಿದೆ. ಇದು ರಾಷ್ಟ್ರಕೂಟರ ಕಾಲದಲ್ಲಿ ಪ್ರಮುಖ ಕೇಂದ್ರವಾಗಿತ್ತು. ಇಲ್ಲಿ ಸ್ಮಾರಕಗಳು ಮತ್ತು ದೇವಾಲಯಗಳಿವೆ. ಕೋಟೆಯೂ ಇದೆ. ಸದ್ಯ ಗ್ರಾಮದ ಮುಖ್ಯದ್ವಾರ ಶಿಥಿಲಾವಸ್ಥೆಗೆ ತಲುಪಿದೆ. ಹಲವು ಬಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ದುರಸ್ತಿ ಮಾಡಿಲ್ಲ. ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ದುರಸ್ತಿ ಮಾಡಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT