ADVERTISEMENT

ಕಲಬುರಗಿ: ಶರಣಬಸವೇಶ್ವರ ದೇವಸ್ಥಾನ ಎದುರಿನ ರಸ್ತೆ ಅಭಿವೃದ್ಧಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 3 ಜೂನ್ 2025, 16:26 IST
Last Updated 3 ಜೂನ್ 2025, 16:26 IST
ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನ ಎದುರಿನ ಮುಖ್ಯರಸ್ತೆ ಅಭಿವೃದ್ಧಿ ಹಾಗೂ ಜಗತ್‌ನ ಬಸವೇಶ್ವರ ಮೂರ್ತಿ ಆವರಣದ ಸೌಂದರ್ಯೀಕರಣಕ್ಕೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕವು ಕುಡಾ ಅಧ್ಯಕ್ಷ ಮಜಹರ್ ಆಲಂ ಖಾನ್‌ ಅವರಿಗೆ ಮನವಿ ಸಲ್ಲಿಸಿತು
ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನ ಎದುರಿನ ಮುಖ್ಯರಸ್ತೆ ಅಭಿವೃದ್ಧಿ ಹಾಗೂ ಜಗತ್‌ನ ಬಸವೇಶ್ವರ ಮೂರ್ತಿ ಆವರಣದ ಸೌಂದರ್ಯೀಕರಣಕ್ಕೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕವು ಕುಡಾ ಅಧ್ಯಕ್ಷ ಮಜಹರ್ ಆಲಂ ಖಾನ್‌ ಅವರಿಗೆ ಮನವಿ ಸಲ್ಲಿಸಿತು   

ಕಲಬುರಗಿ: ನಗರದ ಶರಣಬಸವೇಶ್ವರ ದೇವಸ್ಥಾನ ಎದುರಿನ ಮುಖ್ಯರಸ್ತೆ ಅಭಿವೃದ್ಧಿ ಹಾಗೂ ಜಗತ್ ವೃತ್ತದಲ್ಲಿರುವ ಜಗಜ್ಯೋತಿ ಬಸವೇಶ್ವರ ಮೂರ್ತಿ ಆವರಣದ ಸೌಂದರ್ಯೀಕರಣ ಕಾರ್ಯ ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಕುಡಾ ಅಧ್ಯಕ್ಷ ಮಜಹರ್ ಆಲಂ ಖಾನ್‌ ಅವರಿಗೆ ಮನವಿ ಸಲ್ಲಿಸಿದೆ.

ಮಹಾದಾಸೋಹಿ ಶರಣಬಸವೇಶ್ವರ ದೇವಾಲಯದ ಎದುರಿನ ಮುಖ್ಯರಸ್ತೆ ಅತ್ಯಂತ ಇಕ್ಕಟ್ಟಾಗಿರುವ ಕಾರಣಕ್ಕಾಗಿ ಭಕ್ತಾದಿಗಳ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಅದರಲ್ಲೂ ಮುಖ್ಯವಾಗಿ, ಯುಗಾದಿ ಬಳಿಕ ಒಂದು ತಿಂಗಳು ನಡೆಯುವ ಶರಣಬಸವೇಶ್ವರರ ಜಾತ್ರಾ ಮಹೋತ್ಸವ ಹಾಗೂ ಶ್ರಾವಣ ಮಾಸದ ಆಚರಣೆ ಮತ್ತು ಕಾರ್ತಿಕ ಮಾಸದಲ್ಲಿ ಕಲಬುರಗಿ ನಗರ ಸೇರಿ ರಾಜ್ಯದ ಬೇರೆಬೇರೆ ಭಾಗಗಳಿಂದ ಲಕ್ಷಾಂತರ ಭಕ್ತರು ಬರುತ್ತಾರೆ. ಕಾರಣ ಪ್ರಾಧಿಕಾರದಿಂದ ರಸ್ತೆಯ ದುರಸ್ತಿ ಜೊತೆಗೆ ಸೌಂದರ್ಯೀಕರಣ ಮಾಡಬೇಕು ಎಂದು ಒತ್ತಾಯಿಸಿದೆ.

ನಗರದ ಜಗತ್ ವೃತ್ತದ ಮಹಾನಗರ ಪಾಲಿಕೆ ಪಕ್ಕದಲ್ಲಿರುವ ಅಶ್ವಾರೂಢ ಜಗಜ್ಯೋತಿ ಬಸವೇಶ್ವರ ಮೂರ್ತಿ ಇರುವ ಆವರಣದ ಸೌಂದರ್ಯೀಕರಣ ಕಾರ್ಯವನ್ನು ಸಹ ಕೈಗೆತ್ತಿಕೊಳ್ಳಬೇಕು ಎಂದು ಮಹಾಸಭಾ ಮನವಿ ಮಾಡಿದೆ.

ADVERTISEMENT

ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಶರಣಕುಮಾರ್ ಮೋದಿ ಸೇರಿದಂತೆ ಪದಾಧಿಕಾರಿಗಳು, ಸಮಾಜದ ಮುಖಂಡರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.