ADVERTISEMENT

1 ಲಕ್ಷ ಜನರಿಗೆ ಹಕ್ಕುಪತ್ರ: ಕಂದಾಯ ಸಚಿವ ಆರ್.ಅಶೋಕ

​ಪ್ರಜಾವಾಣಿ ವಾರ್ತೆ
Published 13 ಜನವರಿ 2023, 20:53 IST
Last Updated 13 ಜನವರಿ 2023, 20:53 IST

ಕಲಬುರಗಿ: ‘ಕಲ್ಯಾಣ ಕರ್ನಾಟಕ ಪ್ರದೇಶ ಸೇರಿ ರಾಜ್ಯದಲ್ಲಿರುವ ಲಂಬಾಣಿ ಸಮುದಾಯದ 1 ಲಕ್ಷ ಜನರಿಗೆ ಅವರ ಹೆಸರಿನಲ್ಲೇ ನಿವೇಶನದ ಹಕ್ಕುಪತ್ರ ವಿತರಿಸಲಾಗುವುದು’ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.

‘ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಮಳ‌ಖೇಡದಲ್ಲಿ ಜನವರಿ 19ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಾಂಡಾ, ಹಟ್ಟಿ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುವರು’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

‘ಬಂಜಾರ ಸಮುದಾಯದ ಪವಿತ್ರ ಯಾತ್ರಾ ಸ್ಥಳವಾದ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ಫೆಬ್ರುವರಿಯಲ್ಲಿ ಇಂಥದ್ದೇ ಮತ್ತೊಂದು ಬೃಹತ್‌ ಕಾರ್ಯಕ್ರಮ ಆಯೋಜಿಸಲಾಗುವುದು’ ಎಂದರು.

ADVERTISEMENT

‘ಅಲೆಮಾರಿ ಸೂರಿನಿಂದ ಸುಸ್ಥಿರ ಊರಿನೆಡೆಗೆ’ ಅಭಿಯಾನದಡಿ ಕಂದಾಯ ಗ್ರಾಮಗಳಾಗಿ ಪರಿವರ್ತನೆಗೊಂಡ ತಾಂಡಾ, ಹಟ್ಟಿ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಈ ಪ್ರಕ್ರಿಯೆಗಾಗಿ ರಾಜ್ಯದ ಎಲ್ಲಾ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಹಕ್ಕುಪತ್ರ ವಿತರಿಸಲು ಒಂದು ಗಂಟೆ ಮೀಸಲಿಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.