ಕಲಬುರ್ಗಿ: ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಆರು ತಿಂಗಳ ಹಿಂದೆ ಜಾಮೀನು ಪಡೆದು ಹೊರಬಂದಿದ್ದ ರೌಡಿ ಶೀಟರ್ ಶ್ರೀಕಾಂತ (28) ಎಂಬಾತನನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಇಲ್ಲಿನ ರಾಮನಗರದ ಬಯಲು ಜಾಗಕ್ಕೆ ಶ್ರೀಕಾಂತನನ್ನು ಶನಿವಾರ ಬೆಳಿಗ್ಗೆ ಕರೆದೊಯ್ದು ಆತನಿಗೆ ಮದ್ಯ ಕುಡಿಸಿದ್ದಾರೆ. ಮತ್ತೇರಿದ ಬಳಿಕ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ.
ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.