
ಪಥಸಂಚಲನ
ಕಲಬುರಗಿ: ರಾಜ್ಯದ ಗಮನ ಸೆಳೆದಿರುವ ‘ಚಿತ್ತಾಪುರ ಪಥಸಂಚಲನ’ ಕುರಿತ ಅರ್ಜಿ ಹೈಕೋರ್ಟ್‌ನ ಕಲಬುರಗಿ ಪೀಠದಲ್ಲಿ ಶುಕ್ರವಾರ ಮತ್ತೆ ವಿಚಾರಣೆಗೆ ಬರಲಿದ್ದು, ಎಲ್ಲರ ಚಿತ್ತ ಇದೀಗ ಹೈಕೋರ್ಟ್ ಆದೇಶದತ್ತ ನೆಟ್ಟಿದೆ.
‘ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಅನುಮತಿ ನೀಡುವ ಸಂಬಂಧ ನ.5ರಂದು ಮತ್ತೊಮ್ಮೆ ಶಾಂತಿ ಸಭೆ ನಡೆಸಿ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಬೇಕು’ ಎಂದು ಹೈಕೋರ್ಟ್ ಅ.30ರ ವಿಚಾರಣೆ ವೇಳೆ ಹೇಳಿತ್ತು. ಅದರಂತೆ ನ.5ರಂದು ಬೆಂಗಳೂರಿನಲ್ಲಿ ಸರ್ಕಾರದ ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ ಕಚೇರಿಯಲ್ಲಿ ಶಾಂತಿಸಭೆ ನಡೆದಿತ್ತು.
ಸಭೆಯಲ್ಲಿ ಆರ್‌ಎಸ್‌ಎಸ್ ಪರ ಅರ್ಜಿದಾರ ಚಿಂಚೋಳಿಯ ಅಶೋಕ ಪಾಟೀಲ ನೇತೃತ್ವದ ತಂಡ ಹಾಗೂ ವಕೀಲರು ತಮ್ಮ ನಿಲುವನ್ನು ಪ್ರತಿಪಾದಿಸಿದ್ದರು. ‘ನ.13 ಅಥವಾ ನ.16ರಂದು ಪಥಸಂಚಲನ ನಡೆಸಲು ಅವಕಾಶ ನೀಡಬೇಕು. ಜಿಲ್ಲಾಡಳಿತ ವಿಧಿಸುವ ಷರತ್ತು ಪಾಲಿಸಲಾಗುವುದು’ ಎಂದು ಸಭೆಯಲ್ಲಿ ಹೇಳಿದ್ದರು.
ಶುಕ್ರವಾರದ ವಿಚಾರಣೆಯಲ್ಲಿ 2ನೇ ಸುತ್ತಿನ ಶಾಂತಿ ಸಭೆಯ ವರದಿಯನ್ನು ಸರ್ಕಾರವು ನ್ಯಾಯಾಲಯಕ್ಕೆ ಸಲ್ಲಿಸಲಿದೆ. ಬಳಿಕ ನ್ಯಾಯಾಲಯ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ಸಂಬಂಧ ಏನು ನಿರ್ಧಾರ ಪ್ರಕಟಿಸಬಹುದು ಎಂಬ ಕುತೂಹಲ ಗರಿಗೆದರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.