ADVERTISEMENT

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ: ಆದರೆ, ಷರತ್ತುಗಳು ಅನ್ವಯ!

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2025, 9:39 IST
Last Updated 13 ನವೆಂಬರ್ 2025, 9:39 IST
<div class="paragraphs"><p>ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ,&nbsp;ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠ, RSS </p></div>

ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ, ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠ, RSS

   

ಕಲಬುರಗಿ: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ನಡೆಸಲು ಉದ್ದೇಶಿಸಿದ್ದ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಕೊನೆಗೂ ಮುಹೂರ್ತ ‌ನಿಗದಿಯಾಗಿದೆ.

ನವೆಂಬರ್ 16ರ‌ ಭಾನುವಾರ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30ರ ತನಕ ಗಣವೇಷಧಾರಿಗಳ ಪಥಸಂಚಲನ‌ಕ್ಕೆ ಹೈಕೋರ್ಟ್ ಅವಕಾಶ ನೀಡಿದೆ.

ADVERTISEMENT

ಈ ಸಂಬಂಧ ಅರ್ಜಿ‌ ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ‌ಪೀಠದ ನ್ಯಾಯಮೂರ್ತಿ ಎಂ.ಜಿ.ಎಸ್ ಕಮಲ್ ಅವರಿದ್ದ ಏಕ ಸದಸ್ಯ ನ್ಯಾಯಪೀಠವು, 'ಪಥಸಂಚಲನದಲ್ಲಿ 300 ಮಂದಿ ಗಣವೇಷಧಾರಿಗಳು ಹಾಗೂ 50 ಮಂದಿ ಘೋಷ್ ವೃಂದಕ್ಕೆ ಅವಕಾಶ ನೀಡಲಾಗಿದೆ' ಎಂದು ಆದೇಶ ನೀಡಿ ಅರ್ಜಿ‌ ಇತ್ಯರ್ಥಗೊಳಿಸಿದರು.

ಕಳೆದ ಅಕ್ಟೋಬರ್ 19ರಂದು ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನ ನಡೆಸಲು ಅನುಮತಿ ಕೋರಿತ್ತು. ಆದರೆ, ಇನ್ನೆರಡು ಸಂಘಟನೆಗಳು ಅದೇ ದಿನ ಅನುಮತಿ ‌ಕೋರಿದ್ದರಿಂದ ಚಿತ್ತಾಪುರ ತಹಶೀಲ್ದಾರ್ ಅನುಮತಿ ‌ನಿರಾಕರಿಸಿದ್ದರು. ಅದನ್ನು ಪ್ರಶ್ನಿಸಿ ಆರ್‌ಎಸ್‌ಎಸ್ ಜಿಲ್ಲಾ ಸಂಘಚಾಲಕ ಅಶೋಕ ಪಾಟೀಲ ಹೈಕೋರ್ಟ್‌ ಮೊರೆಹೋಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.